ಲಖನೌ: ಕೋವಿಡ್–19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಗಾಯಕಿ ಕನಿಕಾ ಕಪೂರ್ ಅವರನ್ನು ಸೋಮವಾರ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.

‘ಈಚಿನ ಎರಡು ವರದಿಗಳಿಂದ ಅವರಿಗೆ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಆದರೂ, ಕೆಲ ದಿನ ಅವರು ಮನೆಯಲ್ಲೇ ಪ್ರತ್ಯೇಕವಾಗಿರಬೇಕಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸೋಂಕು ಇಲ್ಲದ್ದು ದೃಢವಾದ ಬಳಿಕ ಬಿಡುಗಡೆ ಮಾಡಲಾಯಿತು’ ಎಂದು ಸಂಜಯಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಆರ್.ಕೆ.ಧಿಮನ್ ತಿಳಿಸಿದರು.

ಸೋಂಕು ಇದ್ದರೂ ನಿರ್ಲಕ್ಷ್ಯ ತೋರಿದ್ದರಿಂದ ಪೊಲೀಸರು ಅವರ ವಿರುದ್ಧ ಮೊಕದ್ದಮೆ ದಾಖಲಿಸಿದ್ದರು.

ಬಾಲಿವುಡ್ ನಿರ್ಮಾಪಕನ ಪುತ್ರಿಗೆ ಸೋಂಕು: ಬಾಲಿವುಡ್ ನಿರ್ಮಾಪಕ ಕರೀಂ ಮೊರಾನಿ ಅವರ ಪುತ್ರಿ ಷಾಜಾ ಮೊರಾನಿ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

ಶ್ರೀಲಂಕಾ ಪ್ರವಾಸದಿಂದ ಮಾರ್ಚ್ ಮೊದಲ ವಾರ ಮರಳಿದ್ದರು. ಆಗ ಸೋಂಕಿನ ಯಾವುದೇ ಸೂಚನೆ ಇರಲಿಲ್ಲ. ಆದರೆ, ಇನ್ನೊಬ್ಬ ಪುತ್ರಿಗೆ ಕೆಲ ಸೂಚನೆಗಳಿದ್ದವು. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ ಎಂದು ಮೊರಾನಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.