ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರಕ್ಕೆ ಆಯ್ಕೆಯಾಗಿರುವ ನೂತನ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷಕೆ.ಸುರೇಂದ್ರನ್ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇಂದು(ಸೋಮವಾರ) ಆರಂಭವಾಗಿರುವ ಕೇರಳ ವಿಧಾನಸಭೆ ಅಧಿವೇಶನದಲ್ಲಿ ಅಶ್ರಪ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನ ಮೆರೆದಿದ್ದಾರೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.