ಬೆಂಗಳೂರು: ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ 'ಅಭಿನಂದನೆ' ಸಲ್ಲಿಸಿದ್ದಾರೆ.

'ರಾಷ್ಟ್ರದ ಬಡತನ ಮತ್ತು ಹಸಿವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದ್ದಕ್ಕೆ ಮೋದಿ ಜೀ ಅವರಿಗೆ ಅಭಿನಂದನೆಗಳು' ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿರುವ ಕಪಿಲ್ ಸಿಬಲ್, ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಭಾರತ ಹಿಂದಿರುವುದನ್ನು ಒತ್ತಿ ಹೇಳಿದ್ದಾರೆ.

''ಅಭಿನಂದನೆಗಳು ಮೋದಿ ಜೀ ಇವುಗಳನ್ನು ತೊಡೆದುಹಾಕಿದ್ದಕ್ಕೆ:
1) ಬಡತನ
2) ಹಸಿವು
3) ಭಾರತವನ್ನು ಜಾಗತಿಕ ಶಕ್ತಿಯಾಗಿ ನಿರ್ಮಾಣ ಮಾಡುವಲ್ಲಿ,
4) ನಮ್ಮ ಡಿಜಿಟಲ್ ಆರ್ಥಿಕತೆ
5) ... ಹೀಗೆ ಹಲವು

ಜಾಗತಿಕ ಹಸಿವು ಸೂಚ್ಯಂಕ:
2020: ಭಾರತ 94ನೇ ರ್ಯಾಂಕ್
2021: ಭಾರತ 101ನೇ ರ್ಯಾಂಕ್

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳಕ್ಕಿಂತ ಹಿಂದಿದ್ದೇವೆ.'' ಎಂದು ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.

ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳ ಪೈಕಿ ಭಾರತ 101ನೇ ಸ್ಥಾನದಲ್ಲಿದೆ. ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ 76, ಮ್ಯಾನ್ಮಾರ್ 71 ಮತ್ತು ಪಾಕಿಸ್ತಾನ 92ನೇ ರ್ಯಾಂಕ್ ಪಡೆದಿವೆ.

ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.