ಮಂಗಳವೇಡ (ಮಹಾರಾಷ್ಟ್ರ): ‘ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ’ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿರುವ ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ, ಸರಿಯಾದ ಪಾಠ ಕಲಿಸಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಹಾರಾಷ್ಟ್ರದ ಪಂಢರಪುರ ಸಮೀಪದ ಮಂಗಳವೇಡೆಯಲ್ಲಿ ವಿಧಾನಸಭೆ ಚುನಾವಣೆ ಅಂಗವಾಗಿ ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರಧಾನಿ ಮತ್ತು ಬಿಜೆಪಿಯವರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡುತ್ತೇನೆ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ’ ಎಂದು ಸವಾಲು ಹಾಕಿದರು.

‘ವರ್ಷಕ್ಕೆ ₹ 56 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳ ಮೂಲಕ ಕರ್ನಾಟಕ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ಧ’ ಎಂದರು.

ಮೋದಿಗೆ ಸವಾಲು: ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ಲಂಚ ಪಡೆದು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಮೋದಿಯವರೇ ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಾನು ನಿಮಗೆ ನೇರ ಸವಾಲು ಹಾಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ’ ಎಂದು ಸವಾಲು ಹಾಕಿದರು.

‘ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಮುಂದೆಯೂ ಬರೋದಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಮೋದಿಯವರಿಗೆ ಇಲ್ಲ. ಇದ್ದರೆ ನನ್ನ ಸವಾಲನ್ನು ಸ್ವೀಕರಿಸಿ’ ಎಂದು ಕರೆ ನೀಡಿದರು.

‘ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಶಾಸಕರನ್ನು ಖರೀದಿಸಿದರಲ್ಲಾ ಅದಕ್ಕೆಲ್ಲಾ ಅಷ್ಟು ಕೋಟಿ ಕೋಟಿ ಹಣ ಎಲ್ಲಿಂದ ಬಂತು ನಿಮಗೆ? ಮಹಾರಾಷ್ಟ್ರ ಜನತೆಗೆ ಉತ್ತರಿಸಿ’ ಎಂದು ಸವಾಲು ಎಸೆದರು.
.'ಮಹಾ' ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ನಿಂದ ₹ 700 ಕೋಟಿ ವಸೂಲಿ: ಮೋದಿ ಆರೋಪ.ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ತಲಾ ₹ 50 ಕೋಟಿ ಆಮಿಷ: ಸಿದ್ದರಾಮಯ್ಯ ಆರೋಪ.
‘ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಈ ಆಪರೇಷನ್ಗೆ ಬಳಸಿದ ಹಣ ಯಾವುದು? ಭ್ರಷ್ಟಾಚಾರದ್ದು ಅಲ್ವಾ? ಆ ಹಣ ಎಲ್ಲಿಂದ ಬಂತು ಎಂದು ಮಹಾರಾಷ್ಟ್ರ ಜನರಿಗೆ ಹೇಳಬಲ್ಲಿರಾ’ ಎಂದು ಪ್ರಶ್ನಿಸಿದರು.

‘ಆಪರೇಷನ್ ಕಮಲ’ದ ಬಿಜೆಪಿಯ ಹೊಲಸು ಸಂಸ್ಕಾರವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ. ಈಗ ಮಹಾರಾಷ್ಟ್ರ ಜನತೆಯ ಸರದಿ. ನೀವೂ ಆಪರೇಷನ್ ಕಮಲದ ಸಂಸ್ಕಾರವನ್ನು ತಿರಸ್ಕರಿಸಿ, ಸೆಡ್ಡು ಹೊಡೆಯಿರಿ’ ಎಂದು ಕರೆ ನೀಡಿದರು.

ಯಾತ್ರಿ ನಿವಾಸ: ಲಕ್ಷಾಂತರ ಭಕ್ತರ ಸನ್ನಿಧಿಯಾಗಿರುವ ಮಂಗಳವೇಡ ಸಮೀಪದ ಮಹಾಲಿಂಗರಾಯ ಕ್ಷೇತ್ರಕ್ಕೆ ಬರುವ ಭಕ್ತರಿಗಾಗಿ ರಾಜ್ಯ ಸರ್ಕಾರ ಯಾತ್ರಿ ನಿವಾಸ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

‘ಪಂಢರಪುರವು ಪಾಂಡುರಂಗ ವಿಠ್ಠಲನ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ. ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಮಂಗಳವೇಡೆ. ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂಥಾ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು’ ಎಂದರು.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಸಂಸದೆ ಪ್ರಣತಿ ಶಿಂಧೆ, ಸಚಿವರಾದ ಎಂ.ಬಿ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.