ಮುಖ್ಯಮಂತ್ರಿ ಆಯ್ಕೆ ಕಗ್ಗಂಟು: ಖರ್ಗೆ–ರಾಹುಲ್ ರಹಸ್ಯ ಸಭೆ | ದೆಹಲಿಯಲ್ಲಿ ಖರ್ಗೆ ಭೇಟಿಯಾದ ಡಿಕೆಶಿ | ಅಮೆರಿಕ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ | ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

ಕರ್ನಾಟಕ ಮಖ್ಯಮಂತ್ರಿ ಆಯ್ಕೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ರಹಸ್ಯ ಸಭೆ ನಡೆದಿದ್ದು, ಈ ವೇಳೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೂಡ ಹಾಜರಿದ್ದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನೂತನ ಸಿಎಂ ಆಯ್ಕೆ ಸಂಬಂಧಿಸಿದಂತೆ ಇಂದು ದೆಹಲಿಗೆ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಅಧ್ಯಕ್ಷ ಮರ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರೂ ಸದ್ಯ ದೆಹಲಿಯಲ್ಲಿದ್ದು, ಉಭಯ ನಾಯಕರ ಜತೆ ಸಭೆ ನಡೆಸಿ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 31ರಂದು ಅಮೆರಿಕಕ್ಕೆ 10 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೂನ್ 4ರಂದು ರಾಹುಲ್ ಗಾಂಧಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಅನಿವಾಸಿ ಭಾರತೀಯರೊಂದಿಗೆ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು–ಗೆಲುವು ಸಾಮಾನ್ಯ. ಸೋಲನ್ನು ಸ್ವೀಕರಿಸಿದ್ದೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ಪಕ್ಷದ ನಾಯಕ ರಮಾನಾಥ ರೈ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪ್ರಕಟಿಸಿದ್ದಾರೆ.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕೇರಳಕ್ಕೆ ಮುಂಗಾರು ಮಳೆ ಜೂನ್ 4ರಂದು ಪ್ರವೇಶಿಸುನ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ವರ್ಷ ಮುಂಗಾರು ಮಳೆ ಮೇ 29ರಂದು ಪ್ರವೇಶಿಸಿತ್ತು. 2021ರಲ್ಲಿ ಜೂನ್ 3 ಮತ್ತು 2020ರಲ್ಲಿ ಜೂನ್ 1ರಂದು ಮಾನ್ಸೂನ್ ಕಾಲಿಟ್ಟಿತ್ತು.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ಎಗ್ರಾದಲ್ಲಿ ಅಕ್ರಮ ಪಟಾಕಿ ಘಟಕದಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಟ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ನಿಷೇಧಿಸುವಂತೆ ಚಿತ್ರಮಂದಿರಗಳಿಗೆ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ. ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ಬಂದ ಕಾರಣ ಚಿತ್ರಮಂದಿರದ ಮಾಲೀಕರೇ ಚಿತ್ರದ ಪ್ರದರ್ಶನ ನಿಲ್ಲಿಸಲು ನಿರ್ಧರಿಸಿದ್ದರು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಮಿಳು ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್‌ಗೆ ಸಂಬಂಧಿಸಿದ 10 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ದಾಖಲೆ ಇಲ್ಲದ ₹26 ಕೋಟಿ ಹಣ ಮತ್ತು ₹3 ಕೋಟಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಮೆಜಾನ್ ಭಾರತದಲ್ಲಿ ವಿವಿಧ ಹಂತಗಳಲ್ಲಿ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಗಳು ತಿಳಿಸಿವೆ. ಉದ್ಯೋಗ ಕಡಿತ ಮಾಡುವ ಅಮೆಜಾನ್‌ನ ನಿರ್ಧಾರದಿಂದಾಗಿ ಜಾಗತಿಕವಾಗಿ 9,000 ಸಿಬ್ಬಂದಿ ನೌಕರಿ ಕಳೆದುಕೊಳ್ಳುವ ಆತಂಕವಿದೆ.

ಸಂಪೂರ್ಣ ಓದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.