ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಠುವಾದಲ್ಲಿ ಭಯೋತ್ಪಾದಕರ ದಾಳಿ: 24 ಮಂದಿ ವಶಕ್ಕೆ, ವಿಚಾರಣೆ

Published 10 ಜುಲೈ 2024, 14:20 IST
Last Updated 10 ಜುಲೈ 2024, 14:20 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಹೊಂಚು ದಾಳಿಯಲ್ಲಿ ಐವರು ಯೋಧರು ಹುತಾತ್ಮರಾದ ಪ್ರಕರಣ ಸಂಬಂಧ 24 ಜನರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 

ಕಾಡಿನಲ್ಲಿ ಅವಿತಿದ್ದಾರೆಂದು ನಂಬಲಾದ ಭಯೋತ್ಪಾದಕರನ್ನು ಹತ್ತಿಕ್ಕಲು ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಠುವಾ, ಉಧಮ್‌ಪುರ ಮತ್ತು ಭದೆರ್ವಾಹ್ ಸೇರಿ ನಾಲ್ಕು ಜಿಲ್ಲೆಗಳಾದ್ಯಂತ ದಟ್ಟ ಅರಣ್ಯಗಳಲ್ಲಿ ಭಾರಿ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಠುವಾದಲ್ಲಿ ಹೊಂಚುದಾಳಿ ನಡೆದ ಮರುದಿನ ಮಂಗಳವಾರ ಸಂಜೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದ ದೋಡಾ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಧಮ್‌ಪುರ, ಸಾಂಬಾ, ರಜೌರಿ ಮತ್ತು ಪೂಂಛ್‌ ಜಿಲ್ಲೆಗಳ ವಿವಿಧ ಭಾಗಗಳಲ್ಲಿನ ದಟ್ಟ ಅರಣ್ಯಗಳಲ್ಲಿ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಬುಧವಾರ ಬೆಳಿಗ್ಗೆ ಸಾಂಬಾದ ಲಾಲಾ ಚಾಕ್ ಪ್ರದೇಶ, ರಜೌರಿಯ ಮಂಜಕೋಟೆ ಮತ್ತು ಪೂಂಛ್‌ನ ಸುರನ್‌ಕೋಟೆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT