ಪಠಾಣ್‌ಕೋಟ್/ ನವದೆಹಲಿ: ಕಠುವಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಶುಭಂ ಸಂಗ್ರಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಇಲ್ಲಿನ ಸೆಷನ್ಸ್ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ಪ್ರಕರಣವು ಕಠುವಾದಿಂದ ಪಂಜಾಬ್‌ನ ಪಠಾಣ್‌ಕೋಟ್‌ಗೆ ವರ್ಗಾವಣೆಯಾಗಿದೆ.

ಸಂಗ್ರಾನನ್ನು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕ ಎಂದು ಪರಿಗಣಿಸಬೇಕು ಎಂದು 2018 ಮಾರ್ಚ್ 27ರಂದು ದೆಹಲಿ ಹೈಕೋರ್ಟ್ ಆದೇಶ ನೀಡಿತ್ತು. 2022ರಲ್ಲಿ ಈ ಆದೇಶ ವಜಾಗೊಳಿಸಿದ್ದ ಸುಪ್ರೀಂಕೋರ್ಟ್, ಕೃತ್ಯ ನಡೆದ ಸಂದರ್ಭದಲ್ಲಿ ಸಂಗ್ರಾ ಅಪ್ರಾಪ್ತ ವಯಸ್ಸಿನ ಹುಡುಗ ಆಗಿರಲಿಲ್ಲ, ವಯಸ್ಕನಾಗಿದ್ದ ಎಂದು ಘೋಷಿಸಿತ್ತು.

ಬಳಿಕ ಜಮ್ಮು ಮತ್ತು ಕಾಶ್ಮೀರದ ಅಪರಾಧ ವಿಭಾಗದ ಪೊಲೀಸರು ಸಂಗ್ರಾ ವಿರುದ್ಧದ ದೋಷಾರೋಪ ಪಟ್ಟಿಯನ್ನು ಕಠುವಾ ಕೋರ್ಟ್‌ನಲ್ಲಿ ಸಲ್ಲಿಸಿದ್ದರು.

2018ರ ಜನವರಿ 10ರಂದು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿ, ನಂತರ ಬಡಿದು ಕೊಂದಿದ್ದರು. ಸಂಗ್ರಾ ಸೇರಿ ಎಂಟು ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.