ಚಂಡೀಗಡ: ಪಂಜಾಬ್ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಚರಣ್ಜಿತ್ ಸಿಂಗ್ ಚನ್ನಿ ಅವರಿಗೆ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶುಭ ಹಾರೈಸಿದ್ದಾರೆ.

ಅಮರಿಂದರ್ ಸಿಂಗ್ರ ಸಂದೇಶವನ್ನು ಅವರ ಮಾಧ್ಯಮ ಸಲಹೆಗಾರ ರವೀಣ್ ತುಕ್ರಲ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.

'ಚರಣ್ಜಿತ್ ಸಿಂಗ್ ಚನ್ನಿಗೆ ನನ್ನ ಶುಭ ಹಾರೈಕೆಗಳು. ಚನ್ನಿ ಅವರು ಗಡಿ ರಾಜ್ಯವಾದ ಪಂಜಾಬ್ ಅನ್ನು ಸುರಕ್ಷಿತವಾಗಿಡುತ್ತಾರೆ ಎಂಬ ಭರವಸೆ ನನಗಿದೆ. ಗಡಿಯುದ್ದಕ್ಕೂ ಹೆಚ್ಚುತ್ತಿರುವ ಆತಂಕದಿಂದ ನಮ್ಮ ಜನರನ್ನು ರಕ್ಷಿಸಲು ಅವರಿಗೆ ಸಾಧ್ಯವಿದೆ ಎಂಬುದಾಗಿ ನಾನು ಭಾವಿಸುತ್ತೇನೆ' ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ...ಕಷ್ಟಪಟ್ಟು ಗಳಿಸಿದ ಶಾಂತಿಗೆ ಹಾನಿಯಾಗಲ್ಲ: ಸೋನಿಯಾಗೆ ಅಮರಿಂದರ್ ಭರವಸೆಯ ಪತ್ರ

ಚಮಕೌರ್ ಸಾಹಿಬ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಚನ್ನಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2015-16ರಲ್ಲಿ ಚನ್ನಿ ಅವರು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಮಾರ್ಚ್ 2017ರಲ್ಲಿ ಸಿಎಂ ಅಮರಿಂದರ್ ಸಿಂಗ್ ಸಂಪುಟಕ್ಕೆ ಸೇರುವ ಮೂಲಕ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದರು.

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.