ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇಂದು ಹೊರಡಿಸಿರುವ ಮೊದಲ ಸರ್ಕಾರಿ ನಿರ್ದೇಶನದ ಕುರಿತು ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ.

'ಇ.ಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಲ ಸಚಿವೆ ಆದ ನನಗೆ ಮೊದಲ ಸರ್ಕಾರಿ ನಿರ್ದೇಶನ ನೀಡಿದ್ದಾರೆ. ಇದು ನನ್ನ ಕಣ್ಣಲ್ಲಿ ನೀರು ಬರುವಂತೆ ಮಾಡಿತು. ಬಂಧನಕ್ಕೊಳಗಾದ ವ್ಯಕ್ತಿ ಈ ಕಷ್ಟದ ಸಮಯದಲ್ಲೂ ತಮ್ಮ ಕುರಿತು ಆಲೋಚಿಸದೇ, ದೆಹಲಿ ಜನರು ಮತ್ತು ಅವರ ಸಮಸ್ಯೆಗಳ ಬಗ್ಗೆ ಮಾತ್ರ ಯೋಚಿಸುತ್ತಾರೆ' ಎಂದು ಹೇಳಿದ್ದಾರೆ.

ದೆಹಲಿಯ ಕೆಲವು ಭಾಗಗಳಲ್ಲಿ ಜನರು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿದ್ದೇನೆ ಎಂಬ ಕಾರಣಕ್ಕೆ ಜನರಿಗೆ ತೊಂದರೆ ಆಗಬಾರದು. ನೀರಿನ ಕೊರತೆ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೇಜ್ರಿವಾಲ್ ತಮ್ಮ ನಿರ್ದೇಶನದಲ್ಲಿ ಒತ್ತಾಯಿಸಿರುವುದಾಗಿ ಅತಿಶಿ ತಿಳಿಸಿದ್ದಾರೆ.

ಅಗತ್ಯವಿದ್ದರೆ ಲೆ.ಗವರ್ನರ್ ವಿ.ಕೆ. ಸಕ್ಸೇನಾ ಅವರ ಸಹಾಯವನ್ನು ಪಡೆಯುವಂತೆ ಕೇಜ್ರಿವಾಲ್ ಸಲಹೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಕೇಜ್ರಿವಾಲ್ ಅವರನ್ನುಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ 22ರಂದು ದೆಹಲಿಯ ವಿಶೇಷ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಮಾರ್ಚ್ 28ರವರೆಗೆ ಇ.ಡಿ ವಶಕ್ಕೆ ನೀಡಿತ್ತು.

ಈ ನಡುವೆ ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಶನಿವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೋಳಿ ರಜೆಯ ಕಾರಣ ನ್ಯಾಯಾಲಯವು ಇದೇ 27ಕ್ಕೂ ಮೊದಲು ಈ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.