ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ದೇಹದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಿದ ಕಾರಣ 'ಲೊ-ಡೋಸ್' ಇನ್ಸುಲಿನ್ ನೀಡಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ.

ಏಮ್ಸ್ ವೈದ್ಯರ ಸಲಹೆಯಂತೆ ಕೇಜ್ರಿವಾಲ್ ಅವರಿಗೆ ಸೋಮವಾರ ಸಂಜೆ ಎರಡು ಯೂನಿಟ್ 'ಲೊ-ಡೋಸ್' ಇನ್ಸುಲಿನ್ ನೀಡಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ರಾತ್ರಿ 7 ಗಂಟೆ ಸುಮಾರಿಗೆ ಅವರ ದೇಹದ ರಕ್ತದಲ್ಲಿನ ಸಕ್ಕರೆ ಮಟ್ಟವು 217ರಷ್ಟಿತ್ತು. ಬಳಿಕ ಅವರ ಆರೋಗ್ಯದ ನಿಗಾ ವಹಿಸುತ್ತಿರುವ ತಿಹಾರ್ನ ವೈದ್ಯರು ಇನ್ಸುಲಿನ್ ನೀಡಲು ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ.

ಏಪ್ರಿಲ್ 20ರಂದು ಸಿಎಂ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಏಮ್ಸ್ ತಜ್ಞರು, ಸಕ್ಕರೆಯ ಮಟ್ಟವು ಒಂದು ನಿರ್ದಿಷ್ಟ ಮಟ್ಟವನ್ನು ದಾಟಿದರೆ ಅವರಿಗೆ ಇನ್ಸುಲಿನ್ ನೀಡಬಹುದು ಎಂದು ತಿಹಾರ್ ವೈದ್ಯರಿಗೆ ಸಲಹೆ ನೀಡಿದ್ದರು ಎಂದು ಅವರು ಹೇಳಿದರು.

ಏತನ್ಮಧ್ಯೆ, ತಿಹಾರ್ನಲ್ಲಿ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು 320 ದಾಟಿದೆ ಎಂದು ಎಎಪಿ ಮೂಲಗಳು ತಿಳಿಸಿವೆ. ಕೆಲವು ದಿನಗಳಿಂದ ಸಕ್ಕರೆ ಮಟ್ಟ ಹೆಚ್ಚಾಗುತ್ತಿದ್ದರೂ ಇದೇ ಮೊದಲ ಬಾರಿಗೆ ಜೈಲಿನಲ್ಲಿ ಇನ್ಸುಲಿನ್ ನೀಡಲಾಗಿದೆ ಎಂದು ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಏಪ್ರಿಲ್ 1ರಂದು ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.
.ವೈದ್ಯರೊಂದಿಗೆ ವಿಡಿಯೊ ಸಮಾಲೋಚನೆ: ಕೇಜ್ರಿವಾಲ್ ಮನವಿ ತಿರಸ್ಕರಿಸಿದ ಕೋರ್ಟ್.ಬಂಧನಕ್ಕೂ ಮೊದಲೇ ಇನ್ಸುಲಿನ್ ತ್ಯಜಿಸಿದ್ದ ಕೇಜ್ರಿವಾಲ್: ಗವರ್ನರ್ಗೆ ವರದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.