ಬಾಂದಾ (ಉತ್ತರ ಪ್ರದೇಶ): ಜೈಲಿಗೆ ಹೋಗಿ ಬಂದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

‘ಬಿಜೆಪಿಯು ಅಧಿಕಾರಕ್ಕೆ ಬಂದರೆ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಸಲಾಗುತ್ತದೆ’ ಎಂಬ ಕೇಜ್ರಿವಾಲ್ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಕೇಜ್ರಿವಾಲ್ ಅವರ ಮಾನಸಿಕ ಸಮತೋಲನ ತಪ್ಪಿದೆ. ಅಣ್ಣಾ ಹಜಾರೆ ಇಟ್ಟಿದ್ದ ಭರವಸೆಯನ್ನು ಅವರು ಛಿದ್ರಗೊಳಿಸಿದ್ದಾರೆ. ಭ್ರಷ್ಟರ ಪರ ನಿಂತಿರುವ ಅವರು ಇದೀಗ ನನ್ನನ್ನು ಗುರಿಯಾಗಿಸುತ್ತಿದ್ದಾರೆ. ಅಣ್ಣಾ ಅವರು ವಿರೋಧಿಸಿದ್ದ ಕಾಂಗ್ರೆಸ್ ಜತೆ ಕೈಜೋಡಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.