ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾಮೀನು ಷರತ್ತುಗಳ ಅನ್ವಯ ಯಾವುದೇ ಅಧಿಕಾರ ಚಲಾಯಿಸುವಂತಿಲ್ಲ. ಹೀಗಾಗಿ, ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದೆಹಲಿ ಬಿಜೆಪಿ ಆಗ್ರಹಿಸಿದೆ.

ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಇಂದು ಸುಪ್ರೀಂ ಕೋರಟ್, ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಇ.ಡಿ ಪ್ರಕರಣದಲ್ಲಿ ವಿಧಿಸಲಾಗಿರುವ ಜಾಮೀನು ಷರತ್ತುಗಳೇ ಸಿಬಿಐ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತೀರಾ ಅಗತ್ಯವಿಲ್ಲದಿದ್ದರೆ ಅವರು ತಮ್ಮ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವಂತಿಲ್ಲ ಅಥವಾ ಯಾವುದೇ ಅಧಿಕೃತ ಫೈಲ್‌ಗೆ ಸಹಿ ಹಾಕುವಂತಿಲ್ಲ. ಅನಿವಾರ್ಯ ಸಂದರ್ಭಗಳಲ್ಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದು ಕಚೇರಿ ಪ್ರವೇಶಿಸಬಹುದು ಎಂದು ಇ.ಡಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡುವಾಗ ಸುಪ್ರೀಂ ಕೋರ್ಟ್ ಷರತ್ತು ಹಾಕಿತ್ತು.

ಕೇಜ್ರಿವಾಲ್ ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಆದರೆ. ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅವರಿಗೆ ಯಾವುದೇ ಹಕ್ಕಿಲ್ಲ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಷರತ್ತುಗಳ ಅನ್ವಯ ಅಧಿಕಾರ ಚಲಾಯಿಸಲಾಗದು. ಹಾಗಾಗಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಸಚ್‌ದೇವ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಅವರನ್ನು ಬಂಧಿಸಿರುವುದು ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದೂ ಅವರು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿತ್ತು.
.ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.