ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ನಡೆಸಿದ ‘ಯುಜಿ–ನೀಟ್’ ಮತ್ತು ‘ಯುಜಿಸಿ–ನೆಟ್’ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿತು.

ಈ ಪರೀಕ್ಷೆಗಳಿಂದ ಸಂಕಷ್ಟಕ್ಕೆ ಒಳಗಾಗಿರುವ ಅಭ್ಯರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ತುರ್ತಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

ಈ ಪರೀಕ್ಷಾ ಅಕ್ರಮಗಳು ಎನ್ಟಿಎ ವಿಶ್ವಾಸಾರ್ಹತೆ ಮತ್ತು ಸಾಮರ್ಥ್ಯವನ್ನು ಪ್ರಶ್ನಿಸುತ್ತವೆ ಎಂದು ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಎಲ್ಡಿಎಫ್ ಶಾಸಕ ಎಂ. ವಿಜಿನ್ ಅವರು ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.