ನವದೆಹಲಿ: ಕೇಂದ್ರ ಸರ್ಕಾರದಿಂದ ಆಗುತ್ತಿರುವ ತೆರಿಗೆ ಅನ್ಯಾಯದ ವಿರುದ್ಧ ಕೇರಳದ ಆಡಳಿತರೂಢ ಎಲ್‌ಡಿಎಫ್ ಸರ್ಕಾರ ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು.

‘ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ’ ಎಂಬ ಹೆಸರಿನಡಿ ಪ್ರತಿಭಟನೆ ಆರಂಭಿಸಿರುವ ಪಕ್ಷದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

‘ಕೇಂದ್ರದ ಸರ್ಕಾರದ ತಾರತಮ್ಯ ನೀತಿ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ. ಪ್ರತಿಭಟನೆ ಮಾಡಬೇಕೆಂದು ಈ ಮೊದಲೇ ನಾವು ನಿರ್ಧರಿಸಿದ್ದೇವು. ಅನುದಾನ ತಾರತಮ್ಯದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದೇವೆ’ ಎಂದು ಕೇರಳ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಇದೇ ವೇಳೆ ಅನುದಾನ ತಾರತಮ್ಯವನ್ನು ಖಂಡಿಸಿ ಸಂಸತ್‌ನ ಗಾಂಧಿ ಪ್ರತಿಮೆ ಎದುರು ಡಿಎಂಕೆ ಸಂಸದರು ಪತ್ರಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.