ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ಭೇಟಿ ಮಾಡಿದ ಕೇರಳ CM: ವಯನಾಡ್ ಸಂತ್ರಸ್ತರಿಗೆ ಪುನರ್ವಸತಿ ಕುರಿತು ಚರ್ಚೆ

Published : 27 ಆಗಸ್ಟ್ 2024, 10:04 IST
Last Updated : 27 ಆಗಸ್ಟ್ 2024, 10:04 IST
ಫಾಲೋ ಮಾಡಿ
Comments

ತಿರುವನಂತಪುರ/ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದರು.

ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಎಂದು ಪಿಎಂಒ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ತಿರುವನಂತಪುರದಲ್ಲಿರುವ ಮುಖ್ಯಮಂತ್ರಿ ಕಚೇರಿ ಕೂಡ ಪೋಸ್ಟ್‌ ಹಂಚಿಕೊಂಡಿದೆ. ಸಿಎಂ ಅವರು ಪದ್ಮನಾಭ ಸ್ವಾಮಿಯ ವಿಗ್ರಹವನ್ನು ಪ್ರಧಾನ ಮಂತ್ರಿಗೆ ಕಾಣಿಕೆಯಾಗಿ ನೀಡುತ್ತಿರುವುದನ್ನು ಪೋಸ್ಟ್‌ನಲ್ಲಿ ಕಾಣಬಹುದಾಗಿದೆ.

ಭೇಟಿಯ ವೇಳೆ ಸಿಎಂ ಅವರು ವಯನಾಡ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಪುನರ್ವಸತಿಗಾಗಿ ಕೇಂದ್ರದಿಂದ ನೆರವು ಕೋರಲಿದ್ದಾರೆ ಎಂದು ಮೂಲಗಳು ಹೇಳಿವೆ.

ಆಗಸ್ಟ್ 10ರಂದು ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಸಂತ್ರಸ್ತರಿಗೆ ಪರಿಹಾರ, ಪುನರ್ವಸತಿಗೆ ಕೇಂದ್ರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದರು.

ವಯನಾಡ್ ಭೂಕುಸಿತದಿಂದಾಗಿ ಸಂತ್ರಸ್ತರಾಗಿರುವ 778 ಕುಟುಂಬಗಳಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಕೇರಳ ಸರ್ಕಾರ ಹೇಳಿದೆ. ಅಲ್ಲದೇ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳ ಪುನರ್ವಸತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಆಗಸ್ಟ್ 29 ರಂದು ಸರ್ವಪಕ್ಷ ಸಭೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT