ತಿರುವನಂತಪುರ: 'ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಸ್ಪರ್ಧಿಸುತ್ತಿದ್ದಾರೆ' ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಪಿಣರಾಯಿ ವಿಜಯನ್, 'ಕಾಂಗ್ರೆಸ್ ಪಕ್ಷದ ಜಾತ್ಯತೀತ ಮುಖವಾಡ ಬಯಲಾಗಿದೆ' ಎಂದು ಹೇಳಿದ್ದಾರೆ.

'ಪ್ರಿಯಾಂಕಾ ಗಾಂಧಿ ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಂಗ್ರೆಸ್ ನಿಲುವೇನು? ಜಮಾತ್-ಎ-ಇಸ್ಲಾಮಿ ಸಿದ್ಧಾಂತವು ಪ್ರಜಾಪ್ರಭುತ್ವದೊಂದಿಗೆ ಹೊಂದಿಕೆಯಾಗುತ್ತದೆಯೇ' ಎಂದು ಪ್ರಶ್ನಿಸಿದ್ದಾರೆ.

'ಜಮಾತ್-ಎ-ಇಸ್ಲಾಮಿ ಸಂಘಟನೆ ದೇಶ ಅಥವಾ ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲ. ಜಮ್ಮು-ಕಾಶ್ಮೀರದಲ್ಲೂ ಬಹಳ ಹಿಂದಿನಿಂದಲೂ ಚುನಾವಣೆಗಳನ್ನು ವಿರೋಧಿಸಿತ್ತು. ಬಳಿಕ ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು' ಎಂದು ಆರೋಪಿಸಿದ್ದಾರೆ.

'ವಯನಾಡ್ನಲ್ಲಿರುವ ಜಮಾತ್-ಎ-ಇಸ್ಲಾಮಿ, ಕಾಶ್ಮೀರದಲ್ಲಿರುವ ಜಮಾತ್-ಎ-ಇಸ್ಲಾಮಿಗಿಂತ ವಿಭಿನ್ನ ಎಂದು ಹೇಳಿಕೊಳುತ್ತದೆ. ಆದರೆ ಸಿದ್ಧಾಂತ ಒಂದೇ ಅಲ್ಲವೇ ? ಅದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಳ್ಳುವುದಿಲ್ಲ' ಎಂದು ಹೇಳಿದ್ದಾರೆ.

'ಜಮಾತ್-ಎ-ಇಸ್ಲಾಮಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿದೆ. ಮುಸ್ಲಿಂ ಲೀಗ್ ಸೇರಿದಂತೆ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಜಮಾತ್-ಎ-ಇಸ್ಲಾಮಿ ಬೆಂಬಲಕ್ಕಾಗಿ ತ್ಯಾಗ ಮಾಡುತ್ತಿರುವಂತೆ ತೋರುತ್ತಿದೆ. ಜಮಾತ್-ಎ-ಇಸ್ಲಾಮಿ ಮತಗಳನ್ನು ತಿರಸ್ಕರಿಸಲು ಕಾಂಗ್ರೆಸ್ಗೆ ಸಾಧ್ಯವೇ?' ಎಂದು ಪ್ರಶ್ನಿಸಿದ್ದಾರೆ.
.Wayanad Bypoll | ಪ್ರಿಯಾಂಕಾ ₹11 ಕೋಟಿ ಮೌಲ್ಯದ ಆಸ್ತಿ ಒಡತಿ.Wayanad Bypoll | ಲೋಕಸಭೆಯಲ್ಲಿ ಕ್ಷೇತ್ರಕ್ಕೆ ಇಬ್ಬರು ಸದಸ್ಯರು: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.