ತಿರುವನಂತಪುರ: ನನ್ನ ಮಗುವನ್ನು ಹುಟ್ಟಿದ ಕೂಡಲೇ ಪೋಷಕರು ಅಪಹರಿಸಿದ್ದಾರೆ ಎಂದು ಆರೋಪಿಸಿರುವ ಸಿಪಿಎಂನ ಹಿರಿಯ ನಾಯಕಪಿ.ಎಸ್. ಜಯಚಂದ್ರನ್ ಅವರ ಪುತ್ರಿ ಅನುಪಮಾ ಎಸ್.ಚಂದ್ರನ್, ಮಗುವನ್ನು ವಾಪಸ್ ಕೊಡಿಸುವಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.

‘ಕಳೆದ ಏಪ್ರಿಲ್ನಿಂದ ಹಲವು ಬಾರಿ ಪೊಲೀಸರಿಗೆ ದೂರು ನೀಡಿದ್ದೇನೆ. ಆದರೆ, ಪೊಲೀಸರು ಜಯಚಂದ್ರನ್ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲು ಹಿಂಜರಿಯುತ್ತಿದ್ದಾರೆ‘ ಎಂದು ಅನುಪಮಾ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಪಮಾ ಅವರ ಪೋಷಕರು, ಸಹೋದರಿ ಮತ್ತು ಪತಿ ಮತ್ತು ತಂದೆಯ ಇಬ್ಬರು ಸ್ನೇಹಿತರು ಸೇರಿದಂತೆ ಆರು ಮಂದಿ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ. ಕಾನೂನು ವಿಭಾಗದಿಂದ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದ ಕಾರಣ, ದೂರು ದಾಖಲಿಸುವುದು ವಿಳಂಬವಾಯಿತು ಎಂದು ಹೇಳಿದ್ದಾರೆ.

ಬಂಧಿತರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ದೂರು ಸಲ್ಲಿಸಿದ್ದರೂ, ಮಗುವನ್ನು ಮರಳಿ ಕೊಡಿಸಲು ನನಗೆ ಯಾರೂ ಸಹಾಯ ಮಾಡಿಲ್ಲ‘ ಎಂದುಅನುಪಮಾ ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.