ತಿರುವನಂತಪುರಂ: ಕೇರಳದಲ್ಲಿ ಈಚೆಗೆ ಸಂಭವಿಸಿದ ಪ್ರವಾಹ, ಭೂಕುಸಿತಗಳಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ₹5 ಲಕ್ಷ ಹಾಗೂ ಮನೆ ಕಳೆದುಕೊಂಡವರಿಗೆ ₹10 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮೃತರ ಕುಟುಂಬಗಳಿಗೆ ನೀಡುವ ₹5 ಲಕ್ಷದ ಪೈಕಿ ₹ 4 ಲಕ್ಷವನ್ನು ರಾಜ್ಯ ವಿಪತ್ತು ಸ್ಪಂದನಾ ನಿಧಿ ಮತ್ತು ಉಳಿದ ₹1 ಲಕ್ಷವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಅಕ್ಟೋಬರ್ 11ರಂದು ಉಗ್ರರೊಂದಿಗೆ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟ ರಾಷ್ಟ್ರೀಯ ರೈಫಲ್ ಬೆಟಾಲಿಯನ್ನ ವೈಶಾಖ್ ಎಚ್. ಅವರ ಕುಟುಂಬದವರಿಗೆ ಹಣಕಾಸಿನ ನೆರವು ನೀಡಲು ಸಹ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.