ತಿರುವನಂತಪುರ: ‘ಕಣ್ಣೂರಿನಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಒಕ್ಕೂಟದ ಸದಸ್ಯರು ತಮ್ಮ ಪ್ರತಿಕೃತಿಯನ್ನು ರಾಜಾರೋಷವಾಗಿ ದಹಿಸಿದ್ದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬೆಂಬಲದಿಂದಲೇ’ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ.

‘ಎಸ್‌ಎಫ್‌ಐ ಸಂಘಟನೆಯ ಸದಸ್ಯರು ದಿಢೀರನೆ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸಿದ್ದು ಅಚ್ಚರಿಯ ವಿಷಯವೇನಲ್ಲ. ಏಕೆಂದರೆ ಅದು ಅವರ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ’ ಎಂದಿದ್ದಾರೆ.

‘ಕೇರಳದ ಉತ್ತರ ಭಾಗದ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಎಸ್‌ಎಫ್‌ಐ ಬೆಂಬಲಿಗರು ಹಲವು ಜನರನ್ನು ಹತ್ಯೆಗೈದಿದ್ದಾರೆ’ ಎಂದೂ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ.

ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿದ್ದ ರಾಜ್ಯಪಾಲ ಖಾನ್ ವಿರುದ್ಧ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕಾರ್ಯಕರ್ತರ ಪ್ರತಿಭಟನೆ ನಡುವೆಯೇ ರಾಜ್ಯಪಾಲರು ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲೇ ತಂಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.