ತಿರುವನಂತಪುರ: ರಾಜ್ಯದ ನರ್ಸಿಂಗ್ ಕೋರ್ಸ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವುದಾಗಿ ಕೇರಳ ಸರ್ಕಾರ ಬುಧವಾರ ಘೋಷಿಸಿದೆ.

ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು, ‘ಬಿಎಸ್‌ಸಿ ನರ್ಸಿಂಗ್ ಮತ್ತು ಸಾಮಾನ್ಯ ನರ್ಸಿಂಗ್ ಕೋರ್ಸ್‌ಗೆ ಸೇರುವ ಲಿಂಗತ್ವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿ ಕಾಲೇಜಿನಲ್ಲಿ ಒಂದು ಸೀಟು ಮೀಸಲಿಡಲಾಗುವುದು’ ಎಂದು ತಿಳಿಸಿದ್ದಾರೆ.

‘ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನರ್ಸಿಂಗ್ ಕ್ಷೇತ್ರದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂಚಿನಲ್ಲಿರುವ ಸಮುದಾಯಗಳ ಸುಧಾರಣೆ ಮತ್ತು ನರ್ಸಿಂಗ್ ಕ್ಷೇತ್ರದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಮೀಸಲಾತಿ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.