ತಿರುವನಂತಪುರ: ಸಣ್ಣಪುಟ್ಟ ಅಂಗಡಿಗಳಲ್ಲಿ ಮಾರಾಟ ಮಾಡುವ ದಿನಬಳಕೆಯ ಮತ್ತು ಸರಕು ವಸ್ತುಗಳಿಗೆ ರಾಜ್ಯದಲ್ಲಿ ಯಾವುದೇ ರೀತಿಯ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇರಳ ಸಚಿವರು ಹೇಳಿದ್ದಾರೆ.

ಕೇರಳದ ಹಣಕಾಸು ಸಚಿವ ಕೆ. ಎನ್. ಬಾಲಗೋಪಾಲ ಅವರು ವಿಧಾನಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ದೇಶದಲ್ಲಿ ಜಿಎಸ್‌ಟಿ ಪರಿಷ್ಕರಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇರಳ ಸರ್ಕಾರದ ಈ ನಿರ್ಧಾರ ಗಮನ ಸೆಳೆದಿದೆ.

ಸಣ್ಣ ಅಂಗಡಿಗಳಲ್ಲಿ 1–2 ಕೆಜಿ ಪ್ಯಾಕ್‌ಗಳಲ್ಲಿ ಚಿಲ್ಲರೆಯಾಗಿ ಮಾರಾಟ ಮಾಡುವ ದಿನಬಳಕೆಯ ವಸ್ತು, ದಿನಸಿ, ಇತರ ಸರಕು ಸಾಮಾಗ್ರಿಗಳಿಗೆ ಕೇರಳ ಸರ್ಕಾರ ಜಿಎಸ್‌ಟಿ ವಿಧಿಸುವುದಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆ ಜಟಾಪಟಿ ನಡೆಯಬಹುದು. ಆದರೂ, ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಕೇರಳ ಸರ್ಕಾರದ ನಿರ್ಧಾರದ ಕುರಿತು ಕೇಂದ್ರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಿಎಸ್‌ಟಿ ಪರಿಹಾರ: ರಾಜ್ಯಗಳ ಬೇಡಿಕೆಗಿಲ್ಲ ಕಿಮ್ಮತ್ತು

ಸಣ್ಣ ಅಂಗಡಿಗಳು, ಮಾರಾಟಗಾರರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗಲಿ ಮತ್ತು ಹೆಚ್ಚಿನ ತೆರಿಗೆ ಹೊರೆ ಬೀಳದಿರಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಕೇಂದ್ರದ ಜತೆ ಸಂಘರ್ಷ ಏರ್ಪಡಬಹುದು. ಆದರೆ ಮುಖ್ಯಮಂತ್ರಿ ಈ ಬಗ್ಗೆ ಕೇಂದ್ರಕ್ಕೆ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ನೀಟ್ ಪರೀಕ್ಷೆ: ಕೇರಳದಲ್ಲಿ ವಿದ್ಯಾರ್ಥಿನಿಯರ ಬ್ರಾ ತೆಗಿಸಿದ ಐವರು ಮಹಿಳೆಯರ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.