ಕೊಚ್ಚಿ: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಸ್ ಡಯಾಸ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆದೇಶ ಪ್ರಕಟಿಸಿದ್ದಾರೆ.
.ಭಯೋತ್ಪಾದನೆ: ತಮಿಳುನಾಡಿನ 11 ಕಡೆಗಳಲ್ಲಿ ಎನ್ಐಎ ದಾಳಿ.ಜಪಾನ್: 5.9 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ.
ಅರ್ಜಿ ವಜಾಗೊಳ್ಳಲು ನಿಖರವಾದ ಅಂಶಗಳು ಸದ್ಯಕ್ಕೆ ಲಭ್ಯವಾಗಿಲ್ಲ.

2016ರಲ್ಲಿ ಸಿದ್ದಿಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

ಮಾಲಿವುಡ್‌ನ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕುರಿತಾದ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಹಿರಂಗವಾದ ಬಳಿಕ ಚಿತ್ರರಂಗದ ಹೈ ಪ್ರೊಫೈಲ್ ವ್ಯಕ್ತಿ ವಿರುದ್ಧ ದಾಖಲಾದ ಎರಡನೇ ಎಫ್‌ಐಆರ್ ಇದಾಗಿದೆ. 2009ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ನಿರ್ದೇಶಕ ರಂಜಿತ್ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯರ ಮೇಲಿನ ದೌರ್ಜನ್ಯ) ಅಡಿ ಮೊದಲ ಪ್ರಕರಣ ದಾಖಲಾಗಿತ್ತು.
.Share Market | ಇದೇ ಮೊದಲ ಬಾರಿಗೆ 85 ಸಾವಿರ ಗಡಿ ದಾಟಿದ ಸೆನ್ಸೆಕ್ಸ್.ಇದು ‘ಅತ್ಯಾಚಾರಿ ಬಚಾವೋ ಮೈತ್ರಿ’: ‘ಇಂಡಿಯಾ’ ಬಣದ ವಿರುದ್ಧ ಪೂನವಾಲಾ ಟೀಕೆ.
ಆರೋಪದ ಬೆನ್ನಲ್ಲೇ ರಂಜಿತ್, ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದಿಕ್ ಸಹ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
.ಯುಪಿ | RPF ಕಾನ್ಸ್ಟೆಬಲ್ಗಳ ಹತ್ಯೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಬಲಿ.ತ್ರಿಪುರಾ | ಶಸ್ತ್ರಾಸ್ತ್ರ ತ್ಯಜಿಸಿ, ಶರಣಾಗತಿಗೆ ಸಜ್ಜಾದ 400 ಉಗ್ರರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.