ಮಲಪ್ಪುರಂ: ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತ ಸ್ಥಳಕ್ಕೆ ತೆರಳುತ್ತಿದ್ದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಕಾರು ಜಿಲ್ಲೆಯ ಮಂಜೇರಿ ಸಮೀಪ ಬುಧವಾರ (ಇಂದು) ಬೆಳಿಗ್ಗೆ ಅಪಘಾತಕ್ಕೀಡಾಗಿದೆ.

ಜಾರ್ಜ್ ಅವರು ರಕ್ಷಣಾ ಕಾರ್ಯಾಚರಣೆ ಪರಿಶೀಲನೆಗೆ ತೆರಳುತ್ತಿದ್ದರು.

ಸಚಿವರ ಕಾರು ಬೆಳಿಗ್ಗೆ 7.10ರ ಸುಮಾರಿಗೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸಚಿವರನ್ನು ಕೂಡಲೇ ಮಂಜೇರಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತಂಕ ಪಡುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿನ ಸಂಖ್ಯೆ 143ಕ್ಕೆ
ಸರಣಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ ರಾತ್ರಿ ವೇಳೆಗೆ 143ಕ್ಕೆ ಏರಿಕೆಯಾಗಿದೆ. ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.

ವಯನಾಡು ಜಿಲ್ಲಾ ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ಮೆಪ್ಪಾಡಿ ಪಟ್ಟಣದ ಸಮೀಪದ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ 130 ಜನರು ಗಾಯಗೊಂಡಿದ್ದಾರೆ.

ಸಾಕಷ್ಟು ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮಲಪ್ಪುರಂ ಜಿಲ್ಲೆಯ ಪೋಥುಕಲ್ನಲ್ಲಿ ಕೆಲವರ ಶವಗಳು ಪತ್ತೆಯಾಗಿವೆ. ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ.

ಸೇನೆ, ವಾಯುಪಡೆ, ನೌಕಾಪಡೆ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಮೆಪ್ಪಾಡಿಯಲ್ಲಿ 2019ರ ಆಗಸ್ಟ್ನಲ್ಲಿ ಸಂಭವಿಸಿದ ಭೂಕುಸಿತದ ವೇಳೆ 17 ಮಂದಿ ಮೃತಪಟ್ಟಿದ್ದರು.
.ವಯನಾಡು ಭೂಕುಸಿತ | ಸಮರೋಪಾದಿ ರಕ್ಷಣಾ ಕಾರ್ಯ; ಸೇನೆಯೂ ಭಾಗಿ.ವಯನಾಡು ಭೂಕುಸಿತ: ಮೃತರ ಸಂಖ್ಯೆ 148ಕ್ಕೆ ಏರಿಕೆ, ಹಲವರು ಸಿಲುಕಿರುವ ಶಂಕೆ.ವಯನಾಡು ಭೂಕುಸಿತ ದುರಂತ: ಕೇರಳದಲ್ಲಿ 2 ದಿನ ಶೋಕಾಚರಣೆ– CM ಪಿಣರಾಯಿ ವಿಜಯನ್ ಆದೇಶ.ವಯನಾಡು ಭೂಕುಸಿತ: ಬಂಡೆ ಹಿಡಿದು ವ್ಯಕ್ತಿಯ ಜೀವನ್ಮರಣ ಹೋರಾಟ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.