ತಿರುವನಂತಪುರ/ನವದೆಹಲಿ: ಉತ್ತರ, ಮಧ್ಯ ಮತ್ತು ಈಶಾನ್ಯ ಭಾರತದ ಹಲವೆಡೆ ಸೋಮವಾರ ಭಾರಿ ಮಳೆಯಾಗಿದೆ. ದೆಹಲಿ ಮತ್ತು ಮಧ್ಯಪ್ರದೇಶದ ಹಲವೆಡೆ ಪ್ರವಾಹ ಸ್ಥಿತಿ ತಲೆದೋರಿದೆ. ಕೇರಳದಲ್ಲಿ ಸೋಮವಾರ ಮಳೆ ಸ್ವಲ್ಪ ಬಿಡುವು ಕೊಟ್ಟಿದ್ದರೂ, ಪ್ರಮುಖ ಜಲಾಶಯಗಳಿಂದ ನೀರುಹೊರ ಬಿಡುತ್ತಿರುವ ಕಾರಣ ಪ್ರವಾಹದ ಆತಂಕ ಎದುರಾಗಿದೆ.

ಕೇರಳದ ಎಲ್ಲಾ ಪ್ರಮುಖ ಜಲಾಶಯಗಳ ಸಂಗ್ರಹ ಗರಿಷ್ಠಮಟ್ಟ ಮುಟ್ಟಿದೆ. ರಾಜ್ಯದ 10ಜಲಾಶಯಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿವಿಧ ಜಲಾಶಯಗಳ ಕೆಳಭಾಗಗಳಲ್ಲಿ ನೆಲೆಸಿರುವ ಜನರನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ. ಪಂಪಾ ನದಿಯಲ್ಲಿ ನೀರಿನ ಹರಿವು ಅಪಾಯಕಾರಿ ಮಟ್ಟ ಮುಟ್ಟಿದೆ. ಶಬರಿಮಲೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಒಡಿಶಾ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸಗಡ, ಉತ್ತರ ಪ್ರದೇಶ, ಬಿಹಾರ, ದೆಹಲಿ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ಭಾರತದ ರಾಜ್ಯಗಳಲ್ಲಿ ಸೋಮವಾರ ಭಾರಿ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.