ತಿರುವನಂತಪುರ: ₹1.57 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದ ತಿರುವನಂತಪುರದಲ್ಲಿರುವ ಪದ್ಮನಾಭಸ್ವಾಮಿ ದೇವಾಯಲಕ್ಕೆ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಇಲಾಖೆ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಭಕ್ತರಿಗೆ ಸಾಂಪ್ರದಾಯಿಕ ಉಡುಪುಗಳನ್ನು ಬಾಡಿಗೆಗೆ ನೀಡುವುದು ಮತ್ತು ವಿವಿಧ ವಸ್ತುಗಳ ಮಾರಾಟದಂತಹ ವಿವಿಧ ಸೇವೆಗಳನ್ನು ಉಲ್ಲೇಖಿಸಿ ಕಳೆದ ಏಳು ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಜಿಎಸ್ಟಿ ಇಲಾಖೆಯು ತೆರಿಗೆ ಬಾಕಿಯನ್ನು ಲೆಕ್ಕಾಚಾರ ಮಾಡುವಾಗ ಧಾರ್ಮಿಕ ಕೇಂದ್ರಗಳಿಗೆ ನೀಡಲಾಗುವ ವಿವಿಧ ವಿನಾಯಿತಿಗಳನ್ನು ಪರಿಗಣಿಸಿಲ್ಲ. ಹಾಗಾಗಿ ಜಿಎಸ್ಟಿ ಇಲಾಖೆಯ ಕ್ರಮದ ವಿರುದ್ಧ ಈಗಾಗಲೇ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯದ ಆದಾಯ ತೆರಿಗೆ ಕೇವಲ ₹16 ಲಕ್ಷದಷ್ಟಿದೆ. ಆ ಮೊತ್ತದ ಜಿಎಸ್ಟಿಯನ್ನು ಈಗಾಗಲೇ ಪಾವತಿಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಈ ಸಂಬಂಧ ಜಿಎಸ್ಟಿ ಅಧಿಕಾರಿಗಳು ಈ ಹಿಂದೆ ದೇವಸ್ಥಾನದ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.