ನವದೆಹಲಿ: ಸಂಸತ್ ವಿಶೇಷ ಅಧಿವೇಶಕ್ಕೆ ಮುಂಚಿತವಾಗಿ ‘ಇಂಡಿಯಾ’ ಮೈತ್ರಿಕೂಟದ ಸಂಸದರ ಸಭೆಯನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ.

ಸೆಪ್ಟೆಂಬರ್ 5ರಂದು ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ

ಸೆಪ್ಟೆಂಬರ್ 18ರಿಂದ 22 ರವರೆಗೆ ನಡೆಯಲಿರುವ ವಿಶೇಷ ಅಧಿವೇಶನಕ್ಕೆ ಸಜ್ಜಾಗಿರುವ ಇಂಡಿಯಾ ಮೈತ್ರಿಕೂಟ, ಕಾರ್ಯತಂತ್ರ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ನಡೆಸುವ ಕುರಿತು ಕೇಂದ್ರ ಸರ್ಕಾರ ಇನ್ನೂ ಸ್ಪಷ್ಪಪಡಿಸಿಲ್ಲ.

2024ರ ಲೋಕಸಭೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಮಣಿಸಲು ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ನಾಯಕರು ಪಣ ತೊಟ್ಟಿದ್ದಾರೆ. ಇತ್ತೀಚೆಗೆ ನಡೆದ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಮೈತ್ರಿಕೂಟ ‘ಇಂಡಿಯಾ’ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.