ನವದೆಹಲಿ: ವಕೀಲ ಕೆ.ಕೆ.ವೇಣುಗೋಪಾಲ್ ಅವರು ಮತ್ತೆ ಮೂರು ತಿಂಗಳು ಭಾರತದ ಅಟಾರ್ನಿ ಜನರಲ್ ಆಗಿ ಕಾರ್ಯನಿರ್ವಹಿಸಲು ಒಪ್ಪಿದ್ದಾರೆ.

‘ವೇಣುಗೋಪಾಲ್ ಅವರ ಅಧಿಕಾರಾವಧಿ ಇದೇ 30ರಂದು ಕೊನೆಗೊಳ್ಳಲಿದೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಈ ಹುದ್ದೆಯಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದರು. ಕೇಂದ್ರ ಸರ್ಕಾರ ಮನವಿ ಮಾಡಿದ್ದರಿಂದ ನಿರ್ಧಾರ ಬದಲಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

2017ರ ಜುಲೈನಲ್ಲಿ ಅಟಾರ್ನಿ ಜನರಲ್ ಆಗಿವೇಣುಗೋಪಾಲ್ ನೇಮಕಗೊಂಡಿದ್ದರು. ಅವರ ಅವಧಿ 2020ರಲ್ಲಿ ಕೊನೆಗೊಂಡಿತ್ತು. ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರವು ಒಂದು ವರ್ಷದ ಅವಧಿಗೆ ಅವರನ್ನು ಹುದ್ದೆಯಲ್ಲಿ ಮುಂದುವರಿಸಿತ್ತು. ಬಳಿಕ ಮತ್ತೊಂದು ವರ್ಷದ ಅವಧಿಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.