ನವದೆಹಲಿ: ಕರ್ತವ್ಯನಿರತ ಆರೋಗ್ಯ ಕಾರ್ಯಕರ್ತರ ಮೇಲೆ ಹಿಂಸಾಚಾರ ನಡೆದ 6 ಗಂಟೆಯೊಳಗೆ ಎಫ್‌ಐಆರ್ ದಾಖಲಿಸುವುದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.

ಕೋಲ್ಕತ್ತದ ವೈದ್ಯ ವಿದ್ಯಾರ್ಥಿಯ ಕೊಲೆ ಪ್ರಕರಣ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿರುವಾಗಲೇ ಕೇಂದ್ರ ಸರ್ಕಾರದಿಂದ ಈ ಆದೇಶ ಬಂದಿದೆ.
.ಕೋಲ್ಕತ್ತ ವೈದ್ಯ ವಿದ್ಯಾರ್ಥಿ ಕೊಲೆ ಖಂಡಿಸಿ ಪ್ರತಿಭಟನೆ: ದೆಹಲಿಯಲ್ಲಿ ನಿಷೇಧಾಜ್ಞೆ.
ಏಮ್ಸ್ ನಿರ್ದೇಶಕರಿಗೆ, ಕೇಂದ್ರ ಸರ್ಕಾರದ ಆಸ್ಪತ್ರೆಗಳ ಮುಖ್ಯಸ್ಥರಿಗೆ, ದೇಶದಾದ್ಯಂತ ಇರುವ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಿಗೆ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯಲ್ ಅವರ ಕಚೇರಿಯು ಈ ಬಗ್ಗೆ ಟಿಪ್ಪಣಿ ಕಳುಹಿಸಿದೆ.

‘ಕರ್ತವ್ಯದಲ್ಲಿರುವ ಯಾವುದೇ ಆರೋಗ್ಯ ಸೇವಾ ಸಿಬ್ಬಂದಿ ಮೇಲೆ ಹಿಂಸಾಚಾರ ನಡೆದರೆ, ಘಟನೆ ಜರುಗಿದ ಗರಿಷ್ಠ ಆರು ಗಂಟೆಯೊಳಗೆ ಎಫ್‌ಐಆರ್ ದಾಖಲಿಸುವುದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿ’ ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.
.ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಹತ್ಯೆ: ಆಕ್ರೋಶ ಹೊರ ಹಾಕಿದ ಬಾಲಿವುಡ್ ತಾರೆಯರು.
‘ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಇನ್ನಿತರ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ನಡೆಯುವುದು ಈಗ ಸಾಮಾನ್ಯ ಎಂಬಂತಾಗಿದೆ’ ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

ಕರ್ತವ್ಯದ ವೇಳೆ ಆರೋಗ್ಯ ಸಿಬ್ಬಂದಿ ದೈಹಿಕ ಹಲ್ಲೆ ಹಾಗೂ ಮೌಖಿಕ ದಾಳಿಗೆ ಒಳಗಾಗುತ್ತಾರೆ. ಬಹುತೇಕ ಪ್ರಕರಣಗಳು ರೋಗಿಗಳು ಅಥವಾ ಅವರ ಪರಿಚಾರಕರಿಂದ ನಡೆಯುತ್ತದೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿದೆ.
.ವೈದ್ಯ ವಿದ್ಯಾರ್ಥಿನಿ ಹತ್ಯೆ: ನ್ಯಾಯಕ್ಕಾಗಿ ನಡುರಾತ್ರಿ ಬೀದಿಗಿಳಿದ ಮಹಿಳೆಯರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.