‘ವೈದ್ಯರು ಪ್ರತಿಭಟನೆ ಆರಂಭಿಸಿದ ಬಳಿಕ ಸೂಕ್ತ ಚಿಕಿತ್ಸೆ ಲಭಿಸದೆ ರಾಜ್ಯದಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆಯು ಸಲ್ಲಿಸಿರುವ ವಸ್ತು ಸ್ಥಿತಿ ವರದಿಯಲ್ಲಿ ಈ ಮಾಹಿತಿ ಇದೆ’ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಪೀಠಕ್ಕೆ ತಿಳಿಸಿದರು. ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಆರೋಗ್ಯ ಸೇವೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ ಲಭ್ಯವಿಲ್ಲ ಎಂದು ಪೀಠವು ಹೇಳಿದೆ. ಮಮತಾ ಬ್ಯಾನರ್ಜಿ ಕರಾಳ ಮುಖ ಸುಪ್ರೀಂ ಕೋರ್ಟ್‌ನಲ್ಲಿ ಅನಾವರಣಗೊಂಡಿದೆ.