ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ ವೈದ್ಯ ವಿದ್ಯಾರ್ಥಿ ಕೊಲೆ ಖಂಡಿಸಿ ಪ್ರತಿಭಟನೆ: ದೆಹಲಿಯಲ್ಲಿ ನಿಷೇಧಾಜ್ಞೆ

Published : 16 ಆಗಸ್ಟ್ 2024, 10:07 IST
Last Updated : 16 ಆಗಸ್ಟ್ 2024, 10:07 IST
ಫಾಲೋ ಮಾಡಿ
Comments

ನವದೆಹಲಿ: ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಅನೇಕ ಸಂಘಟನೆಗಳು ಇಂದು(ಶುಕ್ರವಾರ) ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಕೇಂದ್ರ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅನ್ವಯ ಮಧ್ಯ ದೆಹಲಿಯ ಇತರ ಭಾಗಗಳಲ್ಲಿ ಹಾಗೂ ಸಂಸತ್ತಿನ ಬಳಿ ನಿಷೇಧಾಜ್ಞೆ ವಿಧಿಸಲಾಗಿದೆ. ಅಲ್ಲದೇ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋಲ್ಕತ್ತದ ಸರ್ಕಾರಿ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಏಮ್ಸ್, ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಸೇರಿದಂತೆ ಬಹು ನಿವಾಸಿ ವೈದ್ಯರ ಸಂಘಗಳು (ಆರ್‌ಡಿಎಗಳು) ಶುಕ್ರವಾರ ನಿರ್ಮಾಣ ಭವನದ ಬಳಿ ಪ್ರತಿಭಟನಾ ಸಭೆಗೆ ಕರೆ ನೀಡಿವೆ.

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ​​(FORDA) ಇಂಡಿಯಾ ಗೇಟ್‌ನಲ್ಲಿ ಸಂಜೆ 6 ಗಂಟೆಗೆ ಮೇಣದ ಬತ್ತಿ ಮೆರವಣಿಗೆಗೆ ಕರೆ ನೀಡಿದೆ.

ದೆಹಲಿ ವಿಶ್ವವಿದ್ಯಾನಿಲಯದ ಕ್ರಾಂತಿಕಾರಿ ಯುವ ಸಂಘಟನೆಯು ಮಂಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನಾ ಸಭೆಯನ್ನು ಘೋಷಿಸಿತ್ತು. ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ರಾತ್ರಿ 7.30ಕ್ಕೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT