ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಮತಾ ಬ್ಯಾನರ್ಜಿ ರಾಜೀನಾಮೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Published : 17 ಸೆಪ್ಟೆಂಬರ್ 2024, 9:51 IST
Last Updated : 17 ಸೆಪ್ಟೆಂಬರ್ 2024, 9:51 IST
ಫಾಲೋ ಮಾಡಿ
Comments

ನವದೆಹಲಿ: ಕೋಲ್ಕತ್ತದ ಆರ್.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿ, ಇಂತಹ ಆದೇಶವನ್ನು ಪ್ರಕಟಿಸಲು ತನಗೆ ಯಾವುದೇ ಅವಕಾಶವಿಲ್ಲ ಎಂದು ಅರ್ಜಿಯನ್ನು ತಳ್ಳಿ ಹಾಕಿತು.

‘ವೈದ್ಯರ ಕುಂದುಕೊರತೆಗಳ ಬಗ್ಗೆ ಗಮನಹರಿಸಬಹುದೇ ಹೊರತು ಮುಖ್ಯಮಂತ್ರಿ ಒಬ್ಬರಿಗೆ ರಾಜೀನಾಮೆ ನೀಡಬೇಕು ಎಂದು ಹೇಳಲು, ಇದು ರಾಜಕೀಯ ವೇದಿಕೆಯಲ್ಲ ಹಾಗೂ ಅಂತಹ ಆದೇಶ ಹೊರಡಿಸುವುದು ತಮ್ಮ ಅಧಿಕಾರದ ಭಾಗವಲ್ಲ’ ಎಂದು ಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT