ಕೋಟಾ(ರಾಜಸ್ಥಾನ): ‘ನೀಟ್’ನಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕಾಗಿ ನೊಂದಿದ್ದಳು ಎನ್ನಲಾದ 18 ವರ್ಷದ ವಿದ್ಯಾರ್ಥಿನಿ, ಇಲ್ಲಿನ ಕಟ್ಟಡವೊಂದರ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ಬಾಗೀಶಾ ತಿವಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.

ಇದು, ಈ ವರ್ಷದ 10ನೇ ಸಂಶಯಾಸ್ಪದ ಆತ್ಮಹತ್ಯೆ ಪ್ರಕರಣವಾಗಿದೆ.

‘ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಿಸಿದ ತಾಸಿನೊಳಗೆ ಆಕೆ ಮೃತಪಟ್ಟಳು’ ಎಂದು ಜವಾಹರ ನಗರ ಪೊಲೀಸ್ ಠಾಣೆ ಅಧಿಕಾರಿ ಹರಿನಾರಾಯಣ ಶರ್ಮಾ ತಿಳಿಸಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಬುಧವಾರ ನೀಟ್ ಫಲಿತಾಂಶ ಪ್ರಕಟಿಸಿತ್ತು. ಬಾಗೀಶಾ, 720ಕ್ಕೆ 320 ಅಂಕ ಪಡೆದಿದ್ದರು. ಕಡಿಮೆ ಅಂಕಗಳು ಬಂದಿದ್ದಕ್ಕೆ ಆಕೆ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ ಎಂದು ಹೇಳಿದ್ದಾರೆ.

‘ಬಾಗೀಶಾ, ಕಟ್ಟಡದ 5ನೇ ಮಹಡಿಯಲ್ಲಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ಫಲಿತಾಂಶ ಪ್ರಕಟವಾದ ನಂತರ, 9ನೇ ಮಹಡಿಗೆ ಹೋಗಿ, ಜಿಗಿದಿದ್ದಾಳೆ. ಅಲ್ಲಿನ ಬಾಲ್ಕನಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಆಕೆಯನ್ನು ತಡೆಯಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ’ ಎಂದು ಶರ್ಮಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.