ಹೈದರಾಬಾದ್: ಕೇಂದ್ರ ಸಚಿವ ಬಂಡಿ ಸಂಜಯ್ ಅವರು ತನ್ನ ವಿರುದ್ಧ ಆಧಾರರಹಿತ ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿರುವ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್, ಲೀಗಲ್ ನೋಟಿಸ್ ನೀಡಿದ್ದಾರೆ.

ವಾರದೊಳಗೆ ಕೇಂದ್ರ ಸಚಿವರು ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನೋಟಿಸ್ನಲ್ಲಿ ತಿಳಿಸಲಾಗಿದೆ.

‘ಬಂಡಿ ಸಂಜಯ್ ಅವರು ಅಕ್ಟೋಬರ್ 19ರಂದು ಮಾಧ್ಯಮ ಸಂವಾದದಲ್ಲಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ನಾನು ಡ್ರಗ್ಸ್ ತೆಗೆದುಕೊಳ್ಳುತ್ತೇನೆ ಮತ್ತು ಬಿಆರ್ಎಸ್ ಅಧಿಕಾರದಲ್ಲಿದ್ದಾಗ ದೂರವಾಣಿ ಕದ್ದಾಲಿಕೆಯಲ್ಲಿ ತೊಡಗಿದ್ದೆ ಎಂದೆಲ್ಲ ಆರೋಪಿಸಿದ್ದಾರೆ’ ಎಂದು ಕೆಟಿಆರ್ ತಿಳಿಸಿದ್ದಾರೆ.

‘ನನ್ನ ವರ್ಚಸ್ಸನ್ನು ಕೆಡಿಸುವ ದುರುದ್ದೇಶದಿಂದಲೇ ಅವರು ಈ ರೀತಿಯ ಆರೋಪಗಳನ್ನು ಮಾಡಿದ್ದಾರೆ’ ಎಂದಿರುವ ಕೆಟಿಆರ್, ‘ಕೇಂದ್ರ ಸಚಿವರು ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲಿ’ ಎಂದು ಸವಾಲು ಹಾಕಿದ್ದಾರೆ.

ದಾಖಲೆಗಳಿಲ್ಲದೆ ಈ ರೀತಿಯ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದರೆ, ಕಾನೂನಾತ್ಮಕ ಕ್ರಮಗಳನ್ನೂ ಎದುರಿಸಬೇಕಾಗುತ್ತದೆ ಎಂದು ಕೆಟಿಆರ್ ಎಚ್ಚರಿಸಿದ್ದಾರೆ.

‘ಬಂಡಿ ಸಂಜಯ್ ಅವರ ಹೇಳಿಕೆಗಳು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕವಾಗಿ ಹಂಚಿಕೆಯಾಗಿದೆ. ಅದರಿಂದ ನನ್ನ ವರ್ಚಸ್ಸಿಗೆ ಧಕ್ಕೆಯಾಗಿದೆ’ ಎಂದು ಅವರು ತಿಳಿಸಿದ್ದಾರೆ.

ವಾರದೊಳಗೆ ಕೇಂದ್ರ ಸಚಿವ ಬಂಡಿ ಸಂಜಯ್ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಮಾನನಷ್ಟ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್ನಲ್ಲಿ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.