ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿನ ಬಿಕ್ಕಟ್ಟು ಶಮನಕ್ಕೆ ಭಾರತ–ಚೀನಾ ಸೇನಾ ಕಮಾಂಡರ್‌ಗಳ ನಡುವೆ ಸೋಮವಾರ ಆರನೇ ಸುತ್ತಿನ ಮಾತುಕತೆ ನಡೆಯಲಿದೆ. ಸಂಘರ್ಷ ಶಮನಕ್ಕೆ ಎರಡೂ ದೇಶಗಳುಮಾಡಿಕೊಂಡಿರುವ ಐದು ಅಂಶಗಳ ಸೂತ್ರವನ್ನು ಅನುಷ್ಠಾನಕ್ಕೆ ತರುವ ಕುರಿತುಮಾತುಕತೆ ವೇಳೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ವಾಸ್ತವ ನಿಯಂತ್ರಣ ರೇಖೆಯ ಚೀನಾ ಭಾಗದಲ್ಲಿ ಇರುವ ಮೋಲ್ಡೊದಲ್ಲಿ ಸೋಮವಾರ ಬೆಳಗ್ಗೆ 9ಕ್ಕೆ ಮಾತುಕತೆ ಆರಂಭವಾಗುವ ಸಾಧ್ಯತೆ ಇದೆ. ಈ ನಿಯೋಗದಲ್ಲಿ ಇದೇ ಮೊದಲ ಬಾರಿಗೆ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳೂ ಭಾಗವಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಫೇಲ್ ಹಾರಾಟ: ಕಳೆದ ಮೂರು ವಾರದಲ್ಲಿ ಚೀನಾ ಸೈನಿಕರು ಗಡಿ ಭಾಗದಲ್ಲಿ ಹಲವು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇಂಥ ಪ್ರಚೋದಿತ ಕ್ರಮಗಳಿಗೆ ಪ್ರತ್ಯುತ್ತರವಾಗಿ ಭಾರತದ ಯುದ್ಧಸನ್ನದ್ಧತೆಯನ್ನು ಪ್ರದರ್ಶಿಸಲು,ಇತ್ತೀಚೆಗಷ್ಟೇ ಭಾರತೀಯ ವಾಯುಪಡೆಗೆ ಸೇರ್ಪಡೆಯಾದ ಅತ್ಯಾಧುನಿಕ ಯುದ್ಧ ವಿಮಾನ ರಫೇಲ್ ಅನ್ನು ಲಡಾಖ್ ಪ್ರದೇಶದಲ್ಲಿ ಹಾರಾಟ ನಡೆಸಲು ವಾಯುಪಡೆ ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.