ನವದೆಹಲಿ: ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಸೋಮವಾರ ಆಗ್ರಹಿಸಿದೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಚಿವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸಚಿವರ ವಜಾಕ್ಕೆ ಪಟ್ಟುಹಿಡಿದಿದೆ.

ಲಖಿಂಪುರ ಖೇರಿ ಹಿಂಸಾಚಾರ: ರೈತರಿಗೆ ನ್ಯಾಯ ದೊರೆಯುವ ಭರವಸೆ ಇದೆ ಎಂದ ಟಿಕಾಯತ್

‘ಪ್ರಧಾನಿಯವರು ಯಾವಾಗ ಸಚಿವರನ್ನು ವಜಾಗೊಳಿಸುತ್ತಾರೆ? ರೈತರ ಸಾವಿಗೆ ಕಾರಣರಾದವರನ್ನು ರಕ್ಷಿಸುವುದನ್ನು ಬಿಜೆಪಿ ನಿಲ್ಲಿಸುವುದು ಯಾವಾಗ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಮಿಶ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿಕೊಳ್ಳುವಂತೆ ಸೂಚಿಸಿದೆ. ಜತೆಗೆ, ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಅಲಹಾಬಾದ್ ಹೈಕೋರ್ಟ್‌ಗೆ ನಿರ್ದೇಶಿಸಿದೆ.

ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದು, ಶರಣಾಗಲು 'ಸುಪ್ರೀಂ' ಆದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.