ನವದೆಹಲಿ: ರೈತರ ಪ್ರತಿಭಟನೆಯ ವೇಳೆ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ಪೀಠ, ಪ್ರಕರಣಕ್ಕೆ ಸಂಬಂಧಿಸಿದ ಇತರ ಸಾಕ್ಷಿಗಳ ಹೇಳಿಕೆಗಳನ್ನು ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸಮೀಪದ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ದಾಖಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿತು.

ಪತ್ರಕರ್ತನ ಕೊಲೆ ಸೇರಿದಂತೆ ಎರಡು ದೂರುಗಳ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ತಿಳಿಸಿತು.

ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಉತ್ತರಗಳನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಪೀಠವು, ವಿಚಾರಣೆಯನ್ನು ನವೆಂಬರ್ 8ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.