ಪಟ್ನಾ: ಈ ತಿಂಗಳ 17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ತಿಳಿಸಿದ್ದಾರೆ.

ಪಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಕ್ತ ಪರೀಕ್ಷೆ ಸೇರಿದಂತೆ ನಿಯಮಿತವಾದ ವೈದ್ಯಕೀಯ ಪರೀಕ್ಷೆಗಾಗಿ ನವದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿಂದ ಪಟ್ನಾಗೆ ವಾಪಸಾಗುತ್ತೇನೆ. ಬಳಿಕ ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ತೆರಳಲಿದ್ದೇನೆ. 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಲು ಕಾರ್ಯತಂತ್ರ ರೂಪಿಸಲಾಗುವುದು’ ಎಂದರು.

ಸಮಾನ ಮನಸ್ಕರ ವಿರೋಧ ಪಕ್ಷಗಳ ಮೊದಲ ಸಭೆ ಜೂನ್ 23ರಂದು ಪಟ್ನಾದಲ್ಲಿ ನಡೆದಿತ್ತು. ಎರಡನೇ ಸಭೆ ಜುಲೈ 17, 18ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.