ಪಟ್ನಾ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಭಾನುವಾರ ತಿಳಿಸಿದರು.

‘ಆ್ಯಂಟಿ ಬಯಾಟಿಕ್‌ಗಳ ಅತಿಯಾದ ಸೇವನೆಯಿಂದ ಮೂತ್ರಪಿಂಡದ ವೈಫಲ್ಯವೂ ಸೇರಿ ಅವರಲ್ಲಿ ಹಲವು ಸಮಸ್ಯೆಗಳು ಕಾಣಿಸಿಕೊಂಡಿವೆ. ಅವರ ಮೂತ್ರಪಿಂಡಗಳು ಶೇಕಡ 63ರಷ್ಟು ವಿಫಲಗೊಂಡಿವೆ. ರಕ್ತದೊತ್ತಡವೂ ಏರುಪೇರು ದಾಖಲಿಸುತ್ತಿದೆ. ಆ್ಯಂಟಿ ಬಯಾಟಿಕ್‌ಗಳ ಪರಿಣಾಮ ಕಡಿಮೆ ಆದನಂತರ ಅವರ ಆರೋಗ್ಯ ಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ’ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಡಿ.ಕೆ. ಝಾ ಹೇಳಿದ್ದಾರೆ.

ಮೇವು ಹಗರಣದ ಆರೋಪಿಯಾಗಿದ್ದ ಲಾಲು ಅವರಿಗೆ 2017ರಲ್ಲಿ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜೈಲಿಗೆ ಕಳುಹಿಸಿದ ಕೆಲವೇ ದಿನಗಳಲ್ಲಿ ಅವರಲ್ಲಿ ರಕ್ತದೊತ್ತಡ ಹಾಗೂ ಮೂತ್ರಪಿಂಡದ ಸಮಸ್ಯೆ ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ರಾಂಚಿಯ ಜೈಲಿನಿಂದ ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ (ರಿಮ್ಸ್) ಸ್ಥಳಾಂತರಿಸಲಾಗಿತ್ತು. ಟೈಪ್–2 ಮಧುಮೇಹ ಸೇರಿದಂತೆ ಹಲವು ಕಾಯಿಲೆಗಳಿಗೆ ತುತ್ತಾಗಿರುವ ಅವರಿಗೆ, ಹೃದಯ ಕವಾಟದ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.