ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿವಾದಿತ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಪೊಲೀಸ್ ವಶಕ್ಕೆ

Published 18 ಜುಲೈ 2024, 7:04 IST
Last Updated 18 ಜುಲೈ 2024, 7:04 IST
ಅಕ್ಷರ ಗಾತ್ರ

ಪುಣೆ: ಭೂವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂದೂಕು ತೋರಿಸಿ ಕೆಲವರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ವಿವಾದಿತ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾಡ್‌ನಿಂದ ಮನೋರಮಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪುಣೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಣೆಯ ಮುಲ್ಶಿ ತೆಹಸಿಲ್‌ನ ಗಢವಾಲಿ ಗ್ರಾಮದಲ್ಲಿ ಭೂವಿವಾದಕ್ಕೆ ಸಂಬಂಧಿಸಿದಂತೆ ಮನೋರಮಾ ಮತ್ತು ಆಕೆಯ ಪತಿ ದಿಲೀಪ್ ಖೇಡ್ಕರ್ ಅವರು ಕೆಲವು ವ್ಯಕ್ತಿಗಳಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿರುವ ವಿಡಿಯೊ ವ್ಯಾಪಕವಾಗಿ ಹರಿದಾಡಿತ್ತು.

ಇದರ ಬೆನ್ನಲ್ಲೇ ಪ್ರಕರಣ ದಾಖಲಿಸಿರುವ ಪೊಲೀಸರು, ಮನೋರಮಾ ಪತ್ತೆಗಾಗಿ ವ್ಯಾಪಕ ಹುಡುಕಾಟ ನಡೆಸಿದ್ದರು. ಅಲ್ಲದೆ ಬಂಧನಕ್ಕಾಗಿ ಹಲವು ತಂಡಗಳನ್ನು ರಚಿಸಿದ್ದರು.

ಖೇಡ್ಕರ್ ದಂಪತಿ ಹಾಗೂ ಇತರೆ ಐವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 323ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT