ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಡ್ಡ ಕುಸಿತ: ಗೋವಾ-ಕರ್ನಾಟಕ ಸಂಚಾರ ಅಸ್ತವ್ಯಸ್ತ

Published 18 ಜುಲೈ 2024, 13:41 IST
Last Updated 18 ಜುಲೈ 2024, 13:41 IST
ಅಕ್ಷರ ಗಾತ್ರ

ಪಣಜಿ: ಭಾರಿ ಮಳೆಯಿಂದಾಗಿ ಗುರುವಾರ ನಸುಕಿ ಜಾವ ಗೋವಾದ ಘಾಟ್ ವಿಭಾಗದಲ್ಲಿ ಗುಡ್ಡ ಕುಸಿದಿದ್ದು, ಬೃಹತ್ ಮಣ್ಣಿನ ರಾಶಿ ರಸ್ತೆಗೆ ಬಿದ್ದಿದೆ. ಪರಿಣಾಮ ಗೋವಾ-ಕರ್ನಾಟಕ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಗೋವಾದ ದಕ್ಷಿಣ ಗಡಿಯಲ್ಲಿರುವ ಅನಮೋಡ್ ಘಾಟ್ ಪ್ರದೇಶದ ಶ್ರೀ ದೂಧ್‌ಸಾಗರ್ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯಿಂದ ಅದನ್ನು ತೆರವುಗೊಳಿಸುವ ಕಾರ್ಯ ಮುಂದುವರಿಯುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನಮೋಡ್‌ ಘಾಟ್ ವಿಭಾಗದಿಂದ ಕರ್ನಾಟಕದ ಬೆಳಗಾವಿ ಮತ್ತು ಖಾನಾಪುರಕ್ಕೆ ಸಂಚಾರ ಸ್ಥಗಿತಗೊಂಡಿದೆ ಎಂದು ಅವರು ಹೇಳಿದರು.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗೋವಾದಲ್ಲಿ 'ಆರೆಂಜ್ ಅಲರ್ಟ್' ಘೋಷಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕಳೆದ ಒಂದು ದಿನದಲ್ಲಿ ಉತ್ತರ ಗೋವಾ ಮತ್ತು ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಐಎಂಡಿ ಪ್ರಕಾರ ದಕ್ಷಿಣ ಗೋವಾದ ಪೊಂಡಾ ತಾಲ್ಲೂಕಿನಲ್ಲಿ ಅತಿ ಹೆಚ್ಚು 190 ಸೆಂ.ಮೀ. ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT