ತಿರುವನಂತಪುರ: ಕೇರಳದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿದ್ದು, ರಾಜ್ಯದ ದಕ್ಷಿಣ ಮತ್ತು ಮಧ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಜತೆಗೆ, ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮರಗಳು ನೆಲಸಮಗೊಂಡಿವೆ.

ಗಂಟೆಗಳ ಕಾಲ ಸುರಿದ ನಿರಂತರ ಮಳೆಯಿಂದಾಗಿ ಕೋಟಯಂ ಮತ್ತು ಇಡುಕ್ಕಿ ಜಿಲ್ಲೆಗಳ ತಪ್ಪಲಿನ ಪ್ರದೇಶಗಳಲ್ಲಿ ಭಾರಿ ಹಾನಿ ಉಂಟಾಗಿದೆ. ತೀವ್ರ ಮಳೆಯಿಂದಾಗಿ ತ್ರಿಶೂರ್ ಜಿಲ್ಲೆಯ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

ಭಾರತೀಯ ಹವಾಮಾನ ಇಲಾಖೆಯು ಮಲಪ್ಪುರಂ, ತ್ರಿಶೂರ್ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಇಡುಕ್ಕಿ, ಪಾಲಕ್ಕಾಡ್ ಮತ್ತು ವಯನಾಡ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇತರ ಆರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಇಡುಕ್ಕಿಯ ಕೆಲ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ಮರಗಳು ನೆಲಕ್ಕುರುಳಿರುವ ಬಗ್ಗೆ ವರದಿಯಾಗಿದೆ. ಭೂಕುಸಿತದಲ್ಲಿ ಕೆಲವು ಮನೆಗಳಿಗೆ ಹಾಗೂ ವಾಹನಗಳಿಗೆ ಹಾನಿಯಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.