ನವದೆಹಲಿ: ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಸಂಚರಿಸಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗುವ ಕೆಲವೇ ಕ್ಷಣಗಳ ಮೊದಲಿನ ದೃಶ್ಯ ಎಂದು ಹೇಳಲಾಗುತ್ತಿರುವ ವಿಡಿಯೊ ವೈರಲ್ ಆಗಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ಕೂಡ ಟ್ವೀಟ್ ಮಾಡಿದೆ. ಅಪಘಾತ ನಡೆದ ಹತ್ತಿರದ ಪ್ರದೇಶದಲ್ಲಿದ್ದ ಸ್ಥಳೀಯರು ಸೆರೆಹಿಡಿದ ವಿಡಿಯೊ ಇದಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ:ಬಿಪಿನ್ ರಾವತ್ ದೆಹಲಿ ನಿವಾಸಕ್ಕೆ ಭದ್ರತೆ ಹೆಚ್ಚಳ

ಹೆಲಿಕಾಪ್ಟರ್ ಹಾರಾಡುತ್ತಿರುವ ವಿಡಿಯೊದ ಸತ್ಯಾಸತ್ಯೆಯ ಬಗ್ಗೆ ಭಾರತದ ವಾಯುಪಡೆಯು ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ವಿಡಿಯೊದಲ್ಲಿ ಎಂಐ–17ವಿ5 ಹೆಲಿಕಾಪ್ಟರ್ ಹಾರಾಡುತ್ತಿರುವ ದೃಶ್ಯ ಸೆರೆಯಾಗಿದೆ ಎಂದು ಹೇಳಲಾಗಿದೆ. ಬಳಿಕ ದಟ್ಟವಾದ ಮಂಜಿನಲ್ಲಿ ಕಣ್ಮರೆಯಾದ ಹೆಲಿಕಾಪ್ಟರ್ ಹಾರಾಟದ ಶಬ್ದದಲ್ಲೂ ಬದಲಾವಣೆ ಕಂಡುಬರುತ್ತದೆ. ಈ ವೇಳೆ ಪ್ರತ್ಯಕ್ಷದರ್ಶಿಯೊಬ್ಬರು ಹೆಲಿಕಾಪ್ಟರ್ ಪತನವಾಯಿತೇ ? ಎಂದು ಪ್ರಶ್ನಿಸುತ್ತಾರೆ. ಈ ವೇಳೆ 'ಹೌದು' ಎನ್ನುವ ಮತ್ತೊಂದು ಧ್ವನಿಯು ಕೇಳಿಸುತ್ತದೆ.

ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಮಧ್ಯಾಹ್ನ ಭಾರತೀಯ ವಾಯುಪಡೆಯ ಎಂಐ–17ವಿ5 ಹೆಲಿಕಾಪ್ಟರ್ ಪತನಗೊಂಡಿತು. ಈ ದುರಂತದಲ್ಲಿ, ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ (63), ಅವರ ಪತ್ನಿ ಮಧುಲಿಕಾ, 7 ಅಧಿಕಾರಿಗಳು ಹಾಗೂ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.