ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದಾರೆ.

ಇಂದು ಪಶ್ಚಿಮ ಬಂಗಾಳಕ್ಕೆ ಅಧಿಕೃತ ಭೇಟಿದ ಕೇಂದ್ರ ಸಚಿವ ಅರ್ಜುನ್ ರಾನ್ ಮೇಘವಾಲ್, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿ ನಡೆದ ಸ್ಫೋಟದಲ್ಲಿ 12 ಜನರು ಬಲಿಯಾಗಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಮೊದಲು ಈ ಬಗ್ಗೆ ಸಮೀಕ್ಷೆ ನಡೆಸಿ ನಂತರ ಮಾತನಾಡುತ್ತೇನೆ‘ ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭೇಟಿ ಬಗ್ಗೆ ಮಾತನಾಡಿದ ಅವರು, ‘ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಸೇರಿದಂತೆ ದೆಹಲಿ ಆಡಳಿತಾತ್ಮಕ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿದೆ. ಭಾನುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ಕೇಜ್ರಿವಾಲ್, ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ತಮಗೆ ಬೆಂಬಲ ಸೂಚಿಸುವಂತೆ ಬಿಜೆಪಿಯೇತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ‘ ಎಂದು ಹೇಳಿದರು.

ತಮ್ಮ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಬಹಿರಂಗವಾಗಿ ಹೊರಬರುತ್ತಿರುವುದಕ್ಕೆ ಕೇಜ್ರಿವಾಲ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.