ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗೆ ತುರ್ತು ಗಮನಹರಿಸಬೇಕಾದ ಅಗತ್ಯವಿದೆ ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

ಕಾನೂನು ಸ್ಥಿತಿ ಹದಗೆಟ್ಟಿದೆ ಎಂಬುದಕ್ಕೆ ಈಚೆಗೆ ನಡೆದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮತ್ತು ಇಬ್ಬರು ಸಹೋದರಿಯರ ಕೊಲೆ ಹೊಸ ನಿದರ್ಶನ ಎಂದು ಅವರು ಹೇಳಿದ್ದಾರೆ.

ಗೆಳತಿಗೆ ಕಿರುಕುಳ ನೀಡುತ್ತಿದ್ದಕ್ಕೆ ಆಕ್ಷೇಪಿಸಿದರು ಎಂಬ ಕಾರಣಕ್ಕೆ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಆರ್ಯಭಟ ಕಾಲೇಜು ಬಳಿ ಇರಿದು ಕೊಲ್ಲಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ ಹಣಕಾಸು ವಿವಾದ ಸಂಬಂಧ ಇಬ್ಬರು ಮಹಿಳೆಯರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

‘ದೆಹಲಿಯಲ್ಲಿ ಕ್ರಿಮಿನಲ್ಗಳಿಗೆ ಕಾನೂನಿನ ಭೀತಿಯೇ ಇಲ್ಲವಾಗಿದೆ. ನಾವು ಪಾರಾಗಬಹುದು ಎಂಬ ಭಾವನೆ ಮೂಡಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಮಾಧ್ಯಮದ ಎರಡು ವರದಿಗಳನ್ನು ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.