ತಿರುವನಂತಪುರ: ತಿರುವನಂತಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ನಾಮಪತ್ರ ಸಲ್ಲಿಸುವಾಗ ತಮ್ಮ ಆಸ್ತಿಯ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಿಪಿಎಂ ನೇತೃತ್ವದ ಎಲ್ಡಿಎಫ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಈ ಸಂಬಂಧ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಡ ಈ ಹಿಂದೆಯೇ ಆಯೋಗಕ್ಕೆ ದೂರು ನೀಡಿದೆ.

ಜುಪಿಟರ್ ಕ್ಯಾಪಿಟಲ್ ಸೇರಿದಂತೆ ಅನೇಕ ಹೂಡಿಕೆಗಳ ಬಗ್ಗೆ ರಾಜೀವ್ ಚಂದ್ರಶೇಖರ್ ಅವರು ಪ್ರಮಾಣಪತ್ರದಲ್ಲಿ ನಮೂದಿಸಿಲ್ಲ ಎಂದು ಎಲ್ಡಿಎಫ್ ಆರೋಪಿಸಿದೆ.

ಈ ಆರೋಪವನ್ನು ನಿರಾಕರಿಸಿರುವ ಚಂದ್ರಶೇಖರ್ ಅವರು, ‘ಕಾನೂನು ಪ್ರಕಾರ ನಾನು ವಿವರಗಳನ್ನು ನೀಡಿದ್ದೇನೆ. ಈ ಹಿಂದೆಯೂ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿತ್ತು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.