ನವದೆಹಲಿ: ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ಸಂವಿಧಾನಬಾಹಿರ ಮತ್ತು ಚುನಾವಣಾ ಅಸ್ತ್ರ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ರಾಕೇಶ್ ದ್ವಿವೇದಿ, ರಾಜೀವ್ ಧವನ್ ಮತ್ತು ಅಜಿತ್ ಸಿನ್ಹಾ ಅವರು ಮಸೂದೆ ಕುರಿತು ಆಕ್ಷೇಪ ಎತ್ತಿದ್ದಾರೆ. ಮೀಸಲಾತಿ ಪ್ರಮಾಣವು ಶೇ 50ಕ್ಕಿಂತ ಹೆಚ್ಚಿರಬಾರದು ಎಂದುಇಂದಿರಾ ಸಾಹ್ನಿ ಪ್ರಕರಣದಲ್ಲಿಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪು ಮಸೂದೆ ಜಾರಿಗೆ ಅಡ್ಡಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಜನರನ್ನು ಮಾನಸಿಕವಾಗಿ ಸಂತೃಪ್ತಿ ಪಡಿಸುವುದೊಂದೇ ಈ ಮಸೂದೆ ಗುರಿಯಾಗಿದೆ. ಸಾಕಷ್ಟು ಕಾನೂನು ಅಡೆತಡೆಗಳಿದ್ದು, ಕಾನೂನಿನ ಮಾನ್ಯತೆ ದೊರೆಯುವುದು ಕಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶೇ 10ರ ಮೀಸಲಾತಿಗೆ ದೇವೇಗೌಡ ಬೆಂಬಲ

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಜೆಡಿಎಸ್ ಬೆಂಬಲವಿದೆ. ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾಗಿರುವ ಹಾಗೂ ದುರ್ಬಲ ಸಮುದಾಯದ ಏಳ್ಗೆಯ ವಿಷಯದಲ್ಲಿ ಪಕ್ಷ ಯಾವತ್ತೂ ಬೆಂಬಲವಾಗಿ ನಿಲ್ಲಲಿದೆ.

–ಎಚ್.ಡಿ. ದೇವೇಗೌಡ, ಜೆಡಿಎಸ್ ವರಿಷ್ಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.