ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಕಾರ್ಯಾಚರಿಸುತ್ತಿರುವ ಲಷ್ಕರ್-ಎ-ತಯಬಾ (ಎಲ್ಇಟಿ) ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆಯುವುದರಲ್ಲಿ ಆರೋಪಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಂಧಿತ ಉಗ್ರನನ್ನು ಕುಪ್ವಾರ ಜಿಲ್ಲೆಯ ನಿವಾಸಿ ರಿಯಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಬಂಧಿತ ಉಗ್ರ ನಿವೃತ್ತ ಸೇನಾ ಸಿಬ್ಬಂದಿ ಆಗಿದ್ದು, ಆತನನ್ನು ಭಾನುವಾರ ಬೆಳಿಗ್ಗೆ ದೆಹಲಿಯ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.