ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್–ಎ–ತಯಬಾದ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಉಗ್ರನನ್ನು ಪಿಂಜೂರ ಶೋಪಿಯಾನ್ ನಿವಾಸಿ ಕಿಫಾಯತ್ ಅಯೂಬ್ ಅಲಿ ಎಂದು ಗುರುತಿಸಲಾಗಿದೆ.

ಈತ ಹಲವು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಪೊಲೀಸ್ ದಾಖಲೆಗಳಿಂದ ಗೊತ್ತಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಪತ್ತೆಯಾದ ಒಂದು ಪಿಸ್ತೂಲ್, ಐದು ಸುತ್ತಿನ ಗುಂಡುಗಳು, ಎರಡು ಗ್ರೆನೇಡ್‌ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಅರಿಹಾಲ್ ಗ್ರಾಮದಲ್ಲಿ ಉಗ್ರನೊಬ್ಬ ಅಡಗಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳ ಸಿಬ್ಬಂದಿ ಗುರುವಾರ ಶೋಧ ನಡೆಸಿದ್ದರು. ಈ ವೇಳೆ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ಪ್ರತಿದಾಳಿ ನಡೆಸಿ, ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.