ನವದೆಹಲಿ: ‘ಮತದಾರರ ಚೀಟಿಗೆ ಆಧಾರ್ ಕಾರ್ಡ್ ಜೋಡಿಸುವ ಕಾರ್ಯ ಇನ್ನಷ್ಟೇ ಆರಂಭವಾಗಬೇಕಿದೆ’ ಎಂದು ಕಾನೂನು ಸಚಿವ ಕಿರಣ್ ರಿಜಿಜು ರಾಜ್ಯಸಭೆಗೆ ಗುರುವಾರ ತಿಳಿಸಿದರು. ‘ಇದೊಂದು ನಿರಂತರ ಕಾರ್ಯಕ್ರಮವಾಗಿದ್ದು, ಈ ಜೋಡಣೆಗೆ ಯಾವುದೇ ಕಾಲ ಮಿತಿ ಇರುವುದಿಲ್ಲ’ ಎಂದೂ ಹೇಳಿದರು.

‘ಒಂದು ವೇಳೆ ಮತದಾರರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಜೋಡಣೆಯಾಗಿಲ್ಲ ಎಂದಾದರೆ ಅಂಥವರೂ ಖಂಡಿತವಾಗಿ ಚುನಾವಣೆಯಲ್ಲಿ ಮತದಾನ ಮಾಡಬಹುದು’ ಎಂದರು.

‘ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಅಂದಾದರೆ ಚುನಾವಣಾ ನೋಂದಣಾಧಿಕಾರಿಗೆ ವ್ಯಕ್ತಿಯು ತನ್ನ ಗುರುತು ದೃಢೀಕರಣಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಬಹುದು ಎನ್ನವ ಅವಕಾಶವನ್ನು ಚುನಾವಣಾ ಕಾನೂನು (ತಿದ್ದುಪಡಿ) ಕಾಯ್ದೆ 2021ರಲ್ಲಿ ನೀಡಲಾಗಿದೆ. ಮತದಾರರ ಆಧಾರ್ ಕಾರ್ಡ್ ಸಂಖ್ಯೆಯನ್ನು ಸಂಗ್ರಹಿಸುವ ಕಾರ್ಯಕ್ರಮವನ್ನು ಚುನಾವಣಾ ಆಯೋಗವು 2022ರ ಆಗಸ್ಟ್ 1ರಲ್ಲಿಯೇ ಪ್ರಾರಂಭಿಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.