ಶಿಮ್ಲಾ: ಛತ್ತೀಸಗಢದಲ್ಲಿ ನಡೆದ ಹಗರಣಗಳಿಗೆ(ಅಬಕಾರಿ, ಕಲ್ಲಿದ್ದಲು, ಮಹದೇವ್ ಬೆಟ್ಟಿಂಗ್ ಆ್ಯಪ್) ಜಾರ್ಖಂಡ್ನ ಸಂಪರ್ಕವಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಪ್ರಸಾದ್ ಸಾಹು ಒಡೆತನದ ಒಡಿಶಾ ಮೂಲದ ಡಿಸ್ಟಿಲರಿ ಕಂಪನಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ದಾಖಲೆಯಿಲ್ಲದ ₹351 ಕೋಟಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

‘ಕಾಂಗ್ರೆಸ್ ನಾಯಕರು ಕಪ್ಪು ಹಣದೊಂದಿಗೆ ಸಿಕ್ಕಿಬಿದ್ದ ಹಲವಾರು ಉದಾಹರಣೆಗಳು ನಮ್ಮ ಮುಂದೆ ಇವೆ. ಹೀಗಾಗಿಯೇ ಕಾಂಗ್ರೆಸ್ ನೋಟು ರದ್ದತಿಯನ್ನು ಬಲವಾಗಿ ವಿರೋಧಿಸಿತ್ತು. ಅಷ್ಟು ಮಾತ್ರವಲ್ಲದೇ ಅಕ್ರಮಗಳನ್ನು ಹೆಡೆಮುರಿ ಕಟ್ಟುತ್ತಿರುವ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವನ್ನೂ ಅದು ವಿರೋಧಿಸುತ್ತಿದೆ’ ಎಂದರು.

‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು(₹351 ಕೋಟಿ) ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರೊಬ್ಬರಿಂದ ₹42 ಕೋಟಿ ವಶಕ್ಕೆ ಪಡೆದಿದ್ದರು. ಛತ್ತೀಸಗಡದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಅತಿರೇಕವಾಗಿತ್ತು’ ಎಂದು ಹೇಳಿದರು.

‘ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸಗಢದ ಗೆಲುವು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ತೋರಿಸುತ್ತದೆ. ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಜನರ ಆಶೋತ್ತರಗಳನ್ನು ಈಡೇರಿಸಲು ಕಾಂಗ್ರೆಸ್ ವಿಫಲವಾಗಿದೆ. ಕರ್ನಾಟಕದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದು, ಈ ಬಗ್ಗೆ ಕಾಂಗ್ರೆಸ್ ಮೌನವಹಿಸಿದೆ’ ಎಂದು ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.